ಮಡಿಕೇರಿ, ಏ. 14: ಭಾರತೀಯ ಜನತಾಪಾರ್ಟಿಯ ಜಿಲ್ಲಾ ವೈದ್ಯಕೀಯ ಪ್ರಕೋಷ್ಠದ ವತಿಯಿಂದ ಡಾ| ಬಿ.ಆರ್. ಅಂಬೇಡ್ಕರ್ ಜನ್ಮದಿನದ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಮತ್ತು ಸಲಹಾ ಶಿಬಿರವನ್ನು ತಾ.16ರಂದು ಭಾನುವಾರ ಶಿರಂಗಾಲ ಗ್ರಾ.ಪಂ.ವ್ಯಾಪ್ತಿಯ ನೆಲ್ಲೂರು ಗ್ರಾಮದ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಏರ್ಪಡಿಸಲಾಗಿದೆ. ಸರಕಾರದ ಆರೋಗ್ಯ ಸಂಬಂಧಿತ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲಾಗುವದು. ಸಭೆಯ ಉದ್ಘಾಟನೆಯನ್ನು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಜಿಲ್ಲಾ ಭಾಜಪ ಅಧ್ಯಕ್ಷ ಬಿ.ಬಿ. ಭಾರತೀಶ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನೀಲ್ ಸುಬ್ರಮಣಿ ಭಾಗವಹಿಸಲಿದ್ದಾರೆ.
ಶಿಬಿರದಲ್ಲಿ ನರರೋಗ ಮತ್ತು ಹೃದಯ ಸಂಬಂಧಿ ಖಾಯಿಲೆಗಳ ಬಗ್ಗೆ ತಜ್ಞ ವೈದ್ಯರು ಪಾಲ್ಗೊಳ್ಳಲಿದ್ದಾರೆ. ಶಿಬಿರವು ಪೂರ್ವಾಹ್ನ 10 ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿದೆ.