ನಾಪೆÇೀಕ್ಲು, ಏ. 16: ನಾಪೆÇೀಕ್ಲುವಿನಲ್ಲಿ ಏ. 17ರಿಂದ ನಡೆಯುವ ಬಿದ್ದಾಟಂಡ ಕಪ್ ಹಾಕಿ ಹಬ್ಬಕ್ಕೆ ತೆರಳುವ ಸಂದರ್ಭ ಚಿನ್ನಾಭರಣ ಸೇರಿದಂತೆ ಬೆಲೆ ಬಾಳುವ ವಸ್ತುಗಳ ಬಗ್ಗೆ ಸಾರ್ವಜನಿಕರು ಹೆಚ್ಚಿನ ನಿಗಾ ವಹಿಸುವಂತೆ ನಾಪೆÇೀಕ್ಲು ಠಾಣಾಧಿಕಾರಿ ಬಿ.ಎಸ್.ವೆಂಕಟೇಶ್ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಈ ಬಗ್ಗೆ ‘ಶಕ್ತಿ’ಗೆ ಹೇಳಿಕೆ ನೀಡಿದ ಅವರು ಮನೆಗೆ ಬೀಗ ಹಾಕಿ ತೆರಳುವ ಸಂದರ್ಭದಲ್ಲಿ ಮನೆಯಲ್ಲಿ ದಾಸ್ತಾನು ಇರಿಸಿದ ಕಾಫಿ ಮತ್ತು ಕಾಳು ಮೆಣಸಿನ ಭದ್ರತೆಗೆ ಸರಿಯಾದ ವ್ಯವಸ್ಥೆ ಕಲ್ಪಿಸಬೇಕು. ಹಾಗೆಯೇ ವಾಹನಗಳಲ್ಲಿ ಬೆಲೆ ಬಾಳುವ ಚಿನ್ನಾಭರಣ ಮತ್ತು ವಸ್ತುಗಳನ್ನು ಬಿಟ್ಟು ಹೋಗದಂತೆ ಎಚ್ಚರ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.