ಶನಿವಾರಸಂತೆ, ಏ. 17: ಜಿಲ್ಲೆಯ ಪ್ರವಾಸ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಮಾರ್ಗ ಮಧ್ಯೆ ಶನಿವಾರಸಂತೆಯ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಆಲಿಸಿ ಅರ್ಜಿಗಳನ್ನು ಸ್ವೀಕರಿಸಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಾದಾಸ್ಪದ ವಾಣಿಜ್ಯ ಸಂಕೀರ್ಣ, ಹಿಂದೂ ಸ್ಮಶಾನ ಮುಕ್ತಿಧಾಮದ ಜಾಗ ಒತ್ತುವರಿ, ಬಸ್ ನಿಲ್ದಾಣ ನಿರ್ಮಾಣ ಹಾಗೂ ದೊಡ್ಡಳ್ಳಿ ಗ್ರಾಮದಲ್ಲಿ ಮುಖ್ಯರಸ್ತೆಗೆ ಬೇಲಿ ನಿರ್ಮಾಣದ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿ ಸೂಕ್ತ ಕ್ರಮಕ್ಕಾಗಿ ಆಗ್ರಹಿಸಿದರು.
ಸ್ಥಳದಲ್ಲಿದ್ದ ತಹಶೀಲ್ದಾರ್ ಕೃಷ್ಣ ಹಾಗೂ ಇತರ ಕಂದಾಯ ಅಧಿಕಾರಿಗಳಿಗೆ ಅರ್ಜಿಗಳನ್ನು ನೀಡಿದ ಸಚಿವರು ಸಮಸ್ಯೆಗಳನ್ನು ಪರಿಶೀಲಿಸಿ, ಜಿಲ್ಲಾಧಿಕಾರಿಯವರಿಗೆ ವರದಿ ಸಲ್ಲಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶಿಸಿದರು.
ಈ ಸಂದರ್ಭ ಕಾಂಗ್ರೆಸ್ ಪ್ರಮುಖರಾದ ಎಸ್.ಸಿ. ಶರತ್‍ಶೇಖರ್, ಬಿ.ಎಸ್. ಅನಂತ್ ಕುಮಾರ್, ಅಬ್ಬಾಸ್, ಶುಕ್ಲಾಂಬರ, ಡಿ.ಕೆ. ಸುರೇಶ್, ಎಸ್.ಎಂ. ಮಹೇಶ್, ಮಹಮ್ಮದ್ ಪಾಶ, ಎಸ್.ವಿ. ಜಗದೀಶ್, ಸಂಗಯ್ಯ, ಈರಪ್ಪ, ಮತ್ತಿತರರು ಹಾಜರಿದ್ದರು.