ಸುಂಟಿಕೊಪ್ಪ, ಏ. 17: ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿಯಾಗಿ ಹೆಚ್.ಎಸ್. ಬೋಜಪ್ಪ ಅವರು ಭಾನುವಾರ ಅಧಿಕಾರ ವಹಿಸಿಕೊಂಡರು.

ಸುಂಟಿಕೊಪ್ಪ ಪೊಲೀಸ್ ಠಾಣೆಯ ಠಾಣಾಧಿಕಾರಿಯಾಗಿದ್ದ ಅನೂಪ್ ಮಾದಪ್ಪ ಅವರು ವೃತ್ತ ನಿರೀಕ್ಷಕರಾಗಿ ಮುಂಬಡ್ತಿ ಹೊಂದಿದ್ದು, ತೆರವಾದ ಸ್ಥಾನಕ್ಕೆ ನೂತನ ಠಾಣಾಧಿಕಾರಿಯಾಗಿ ಆಗಮಿಸಿದ್ದ ಹೆಚ್.ಎಸ್. ಬೋಜಪ್ಪ ಅವರಿಗೆ ಅನೂಪ್ ಮಾದಪ್ಪ ಅವರು ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭ ಸುಂಟಿಕೊಪ್ಪ ಪೊಲೀಸ್ ಠಾಣೆಯ ಎ.ಎಸ್.ಐ. ಗುಣಶೇಖರ್, ಗೀತಾ, ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.