ಟಿ. ಶೆಟ್ಟಿಗೇರಿ: ಗುಂಡ್ಲುಪೇಟೆ ಮತ್ತು ನಂಜನಗೂಡು ವಿಧಾನಸಬಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿರುವದಕ್ಕೆ ಟಿ. ಶೆಟ್ಟಿಗೇರಿಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಟಿ. ಶೆಟ್ಟಿಗೇರಿ: ಗುಂಡ್ಲುಪೇಟೆ ಮತ್ತು ನಂಜನಗೂಡು ವಿಧಾನಸಬಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿರುವದಕ್ಕೆ ಟಿ. ಶೆಟ್ಟಿಗೇರಿಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಧರ್ಮಜ ಉತ್ತಪ್ಪ ಮಾತನಾಡಿ, ಎರಡು ಕ್ಷೇತ್ರದ ಉಪಚುನಾವಣೆ ಯಲ್ಲಿ ಕಾಂಗ್ರೆಸ್ ಪಕ್ಷ ಗೆಲವು ಸಾಧಿಸಿದ್ದು, ವೀರಾಜಪೇಟೆ ಮತ್ತು ಮಡಿಕೇರಿ ವಿಧಾನ ಸಭಾ ಕ್ಷೇತ್ರದಲ್ಲಿಯೂ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯ ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಜಿ.ಪಂ. ಸದಸ್ಯ ಶಿವು ಮಾದಪ್ಪ, ಗ್ರಾ.ಪಂ. ಸದಸ್ಯ ಚೊಟ್ಟೆಯಂಡಮಾಡ ಉದಯ, ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾದ ಅಪ್ಪಚಂಗಡ ಮೋಟಯ್ಯ, ಚೊಟ್ಟೆಯಂಡಮಾಡ ಬೋಸು, ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಮಚ್ಚಮಾಡ ಸಜನ್, ಗ್ರಾ.ಪಂ. ಮಾಜಿ ಅಧ್ಯಕ್ಷ ಪೆಮ್ಮಂಡ ರಾಜ ಕುಶಾಲಪ್ಪ, ಕಾಳಿಮಾಡ ಪ್ರಶಾಂತ್ ಮತ್ತಿತರರು ಹಾಜರಿದ್ದರು.