ಸೋಮವಾರಪೇಟೆ ಸಮೀಪದ ಹಾನಗಲ್ಲು ಬಾಣೆಯಲ್ಲಿರುವ ಶ್ರೀ ಚೌಡೇಶ್ವರಿ ದೇವಿಯ 28 ನೇ ವರ್ಷದ ವಾರ್ಷಿಕ ಮಹಾಪೂಜೋತ್ಸವಕ್ಕೆ ಚಾಲನೆ ದೊರೆತಿದ್ದು, ತಾ. 18ರಂದು (ಇಂದು) ವಾರ್ಷಿಕ ಮಹೋತ್ಸವ ನೆರವೇರಲಿದೆ.ಪೂಜೋತ್ಸವ ಅಂಗವಾಗಿ ದೇವಾಲಯದಲ್ಲಿ ಗಣಪತಿ ಹೋಮ, ಗಂಗೆ ಪೂಜೆ, ಕಲಶಾಭಿಷೇಕ ಸೇರಿದಂತೆ ಇತರ ಪೂಜಾ ಕೈಂಕರ್ಯಗಳು ನಡೆದಿದ್ದು, ಗ್ರಾಮಸ್ಥರಿಗೆ ವಿವಿಧ ಕ್ರೀಡಾಕೂಟಗಳನ್ನೂ ಆಯೋಜಿಸಲಾಗಿತ್ತು.
ಮಧ್ಯಾಹ್ನ ಮಹಾಮಂಗಳಾರತಿ ನಂತರ ಅನ್ನದಾನ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಶಿವಕುಮಾರ್ ತಿಳಿಸಿದ್ದಾರೆ.
ಪೂರ್ವಾಹ್ನ 11.30ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶಾಸಕ ರಂಜನ್, ಉದ್ಯಮಿ ಹರಪಳ್ಳಿ ರವೀಂದ್ರ, ಗ್ರಾ.ಪಂ. ಅಧ್ಯಕ್ಷೆ ರೇಣುಕಾ ವೆಂಕಟೇಶ್, ಜಿ.ಪಂ. ಸದಸ್ಯರುಗಳಾದ ಬಿ.ಜೆ. ದೀಪಕ್, ಪೂರ್ಣಿಮಾ ಗೋಪಾಲ್, ತಾ. ಪಂ. ಸದಸ್ಯೆ ತಂಗಮ್ಮ, ಕಾಂಗ್ರೆಸ್ ಮುಖಂಡ ಕೆ.ಎಂ. ಲೋಕೇಶ್, ಜೆಡಿಎಸ್ ಮುಖಂಡ ಭರತ್‍ಕುಮಾರ್, ಗ್ರಾ.ಪಂ. ಉಪಾಧ್ಯಕ್ಷ ಮಿಥುನ್, ಸದಸ್ಯ ಶಿವಪ್ಪ, ಪಿಡಿಓ ರವೀಶ್ ಭಾಗವಹಿಸಲಿದ್ದಾರೆ ಎಂದು ಸಮಿತಿ ಕಾರ್ಯದರ್ಶಿ ಗಿರೀಶ್ ತಿಳಿಸಿದ್ದಾರೆ.