ಸೋಮವಾರಪೇಟೆ, ಏ. 20: ಜಿ.ಪಂ., ಕೃಷಿ ಇಲಾಖೆ ಆಶ್ರಯದಲ್ಲಿ ತಾ. 22 ರಂದು (ನಾಳೆ) ಪೂರ್ವಾಹ್ನ 10.30ಕ್ಕೆ ಸಮೀಪದ ಗೋಣಿಮರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕೃಷಿ ಅಭಿಯಾನ ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮವನ್ನು ಜಿ.ಪಂ. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್.ಆರ್. ಶ್ರೀನಿವಾಸ್ ಉದ್ಘಾಟಿಸಲಿದ್ದು, ತಾ.ಪಂ. ಸದಸ್ಯೆ ಸವಿತಾ ಈರಪ್ಪ ಅವರು ವಸ್ತು ಪ್ರದರ್ಶನದ ಮಳಿಗೆ ಉದ್ಘಾಟಿಸಲಿದ್ದಾರೆ.ಗ್ರಾ.ಪಂ. ಅಧ್ಯಕ್ಷೆ ಸವಿತಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ರಾಮಪ್ಪ ಅವರು ಅಭಿಯಾನದ ಬಗ್ಗೆ ಮಾಹಿತಿ ನೀಡಲಿದ್ದಾರೆ. ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದ ಡಾ. ಪ್ರಭಾಕರ್ ಹಾಗೂ ಚೆಟ್ಟಳ್ಳಿ ಸಿಸಿಆರ್ಐನ ಕೀಟ ಶಾಸ್ತ್ರಜ್ಞ ಡಾ. ವೆಂಕಟರಮಣಪ್ಪ ಅವರುಗಳೊಂದಿಗೆ ರೈತ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕೃಷಿಕರು ಭಾಗವಹಿಸುವ ಮೂಲಕ ಕೃಷಿ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಡಾ. ರಾಜಶೇಖರ್ ತಿಳಿಸಿದ್ದಾರೆ.