ಮಡಿಕೇರಿ, ಏ. 20: ಕೊಡಗು ಮುಸ್ಲಿಂ ಸ್ಪೋಟ್ರ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ ವತಿಯಿಂದ 9ನೇ ವರ್ಷದ ಜಿಲ್ಲಾಮಟ್ಟದ ಮುಸ್ಲಿಂ ಕಪ್ ವಾಲಿಬಾಲ್ ಪಂದ್ಯಾಟವನ್ನು ತಾ. 22 ರಂದು (ನಾಳೆ) ಮತ್ತು ತಾ. 23 ರಂದು ಆಯೋಜಿಸಲಾಗಿದೆ.ತಾ. 22 ರಂದು (ನಾಳೆ) ಸಂಜೆ 5 ಗಂಟೆಗೆ ವೀರಾಜಪೇಟೆ ತಾಲೂಕು ಮೈದಾನದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕೊಡಗು ಜಿಲ್ಲಾ ವಕ್ಛ್ ಮಂಡಳಿ ಅಧ್ಯಕ್ಷ ಎಂ.ಹೆಚ್. ಅಬ್ದುಲ್ ರೆಹಮಾನ್ ಉದ್ಘಾಟನೆ ನೆರವೇರಿಸಲಿದ್ದಾರೆ.ಕೊಡಗು ಮುಸ್ಲಿಂ ಸ್ಪೋಟ್ರ್ಸ್ ಕಲ್ಚರಲ್ ಅಸೋಸಿಯೇಷನ್‍ನ ಅಧ್ಯಕ್ಷ ಕೆ.ಎಂ. ಕುಂಞÂ ಅಬ್ದುಲ್ಲಾ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ಮಾಜಿ ವಿಧಾನ ಪರಿಷತ್ ಸದಸ್ಯ ಎ.ಕೆ. ಸುಬ್ಬಯ್ಯ, ವೀರಾಜಪೇಟೆ ಪ.ಪಂ. ಅಧ್ಯಕ್ಷ ಸಚಿನ್ ಕುಟ್ಟಯ್ಯ ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ.