ಕೂಡಿಗೆ, ಏ. 20: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ 126ನೇ ಜಯಂತಿ ಮತ್ತು ಬಾಬು ಜಗಜೀವನ್ ರಾಂ ಅವರ 110 ನೇ ಜಯಂತಿ ಅಂಗವಾಗಿ ತಾ. 23 ರಂದು ಕೂಡಿಗೆಯ ರೈತ ಭವನದಲ್ಲಿ ಕಾರ್ಯಕರ್ತರ ಸಮಾವೇಶ ಮತ್ತು ವಿವಿಧ ಪಕ್ಷದಿಂದ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಳ್ಳುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಕೆ.ಜಿ. ಮಂಜುನಾಥ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಎಂ.ಎಲ್.ಸಿ. ಎಸ್.ಜಿ. ಮೇದಪ್ಪ, ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ. ಭಾರತೀಶ್, ಜಿಲ್ಲಾ ಉಪಾಧ್ಯಕ್ಷ ಗಣಿ ಪ್ರಸಾದ್, ತಾಲೂಕು ಅಧ್ಯಕ್ಷ ಕುಮಾರಪ್ಪ ಮತ್ತಿತರರು ಆಗಮಿಸುವರು.