ಮಡಿಕೇರಿ, ಏ.20 : ರಾಜ್ಯ ಯುವ ಕಾಂಗ್ರೆಸ್, ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಮಡಿಕೇರಿ, ವೀರಾಜಪೇಟೆ ವಿಧಾನ ಸಭಾ ಕ್ಷೇತ್ರಗಳ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಸ್ಥಾನಗಳಿಗೆ ಮೇ 9 ರಂದು ಚುನಾವಣೆ ನಡೆಯಲಿದೆ.
ನಗರದ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ತಾ.21 ರಂದು (ಇಂದು) ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸ್ಪರ್ಧಿಗಳು ಅರ್ಜಿಯನ್ನು ಸಲ್ಲಿಸ ಬಹುದಾಗಿದೆ ಎಂದು ಎವೈಸಿಸಿ ಯಿಂದ ನಿಯೋಜನೆ ಗೊಂಡಿರುವ ಜಿಲ್ಲಾ ಚುನಾವಣಾಧಿಕಾರಿ ಎಂ.ರಾಜು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಯುವ ಕಾಂಗ್ರೆಸ್ ಘಟಕದಲ್ಲಿ ನೂತನವಾಗಿ ಸದಸ್ಯತ್ವ ಹೊಂದಿರುವವರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ತಾ.22 ರಂದು ನಾಮಪತ್ರ ಪರಿಶೀಲನೆ ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ತಾ.23 ರಂದು ಚಿಹ್ನೆಯನ್ನು ವಿತರಿಸಲಾಗುವದೆಂದು ಅವರು ಹೇಳಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಈ ವಿಳಾಸವನ್ನು ತಿತಿತಿ.iಥಿಛಿಞಚಿಡಿಟಿಚಿಣಚಿಞಚಿ.iಟಿ ಸಂಪರ್ಕಿಸಬಹುದಾಗಿದೆ.