ಕುಶಾಲನಗರ, ಏ. 20: ವಿಶ್ವ ಭೂಮಿ ದಿನಾಚರಣೆ ಅಂಗವಾಗಿ ಕುಶಾಲನಗರ ಸರಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ತಾ. 22 ರಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಅರಣ್ಯ ಇಲಾಖೆ, ಕಾವೇರಿ ನದಿ ಸ್ವಚ್ಛತಾ ಆಂದೋಲನ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.
ಮಡಿಕೇರಿ ಉಪ ವಿಭಾಗದ ಅರಣ್ಯ ಉಪ ಸಂರಕ್ಷಣಾಧಿಕಾರಿ ಸೂರ್ಯಸೇನ್ ಕಾಲೇಜಿನ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಚಾಲನೆ ನೀಡುವರು. ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟೇಶ್ ಬೆಮ್ಮತ್ತಿ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೋಹನ್ಪ್ರಭು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಿರಿಯ ಪರಿಸರ ಅಧಿಕಾರಿಗಳಾದ ಕೆ.ಎಂ. ಲಿಂಗರಾಜು ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಭೂಮಿ ದಿನಾಚರಣೆ ಅಂಗವಾಗಿ ತಾ. 22 ರಂದು ನೈಸರ್ಗಿಕ ವ್ಯವಸ್ಥೆ ಹೊರತಾಗಿ ಆಧುನಿಕ ತಂತ್ರಜ್ಞಾನಗಳ ಸೇವೆಗಳನ್ನು ಸ್ಥಗಿತಗೊಳಿಸುವದರೊಂದಿಗೆ (ಮೊಬೈಲ್, ಲಾಪ್ಟಾಪ್, ವಿದ್ಯುತ್ ಉಪಕರಣಗಳು, ಸ್ವಂತ ವಾಹನಗಳ ಓಡಾಟ) ವಿಶೇಷವಾಗಿ ಆಚರಣೆ ನಡೆಸುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಾರ್ವಜನಿಕರಲ್ಲಿ ಮನವಿ ಮಾಡಿದೆ.