ಸೋಮವಾರಪೇಟೆ, ಏ. 24: ಕಳಪೆ ಗುಣಮಟ್ಟದ ಕೃಷಿ ಪರಿಕರ ಗಳನ್ನು ವಿತರಿಸುವದರಿಂದ ರೈತರು ಕೃಷಿಯಲ್ಲಿ ತೀವ್ರ ನಷ್ಟಕ್ಕೊಳಗಾಗಿ ಜೀವನ ದುಸ್ತರವಾಗುವ ಸಂಭವ ಅಧಿಕವಿದ್ದು, ಈ ಹಿನ್ನೆಲೆ ಕೃಷಿ ಹಾಗೂ ತೋಟಗಾರಿಕಾ ಇಲಾಖೆ ಗಳು ಹೆಚ್ಚಿನ ಕಾಳಜಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ತಾ.ಪಂ. ಉಪಾಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್ ಹೇಳಿದರು.
ಜಿ.ಪಂ., ಕೃಷಿ ಇಲಾಖೆ ಆಶ್ರಯ ದಲ್ಲಿ ಸಮೀಪದ ಗೋಣಿಮರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತಾ. ಪಂ. ಸದಸ್ಯೆ ಸವಿತಾ ಈರಪ್ಪ, ಗ್ರಾ.ಪಂ. ಅಧ್ಯಕ್ಷೆ ಸವಿತಾ, ಕೃಷಿಕ ಸಮಾಜದ ಅಧ್ಯಕ್ಷ ಎಸ್.ಪಿ.ಪೊನ್ನಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು. ಚೆಟ್ಟಳ್ಳಿ ಸಿಸಿಆರ್ಐನ ಕೀಟ ಶಾಸ್ತ್ರಜ್ಞ ಡಾ. ವೆಂಕಟರಮಣಪ್ಪ ಮತ್ತು ಮುರುಳಿ ರೈತರೊಂದಿಗೆ ಸಂವಾದ ನಡೆಸಿದರು. ಸಹಾಯಕ ಕೃಷಿ ನಿರ್ದೇಶಕ ಡಾ. ರಾಜಶೇಖರ್ ಕೃಷಿ ಇಲಾಖೆಯಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.