ಗೋಣಿಕೊಪ್ಪಲು, ಏ. 25: ಸರ್ಕಾರದ ವಿವಿಧ ಸವಲತ್ತುಗಳು ಅರ್ಹ ಫಲಾನುಭವಿಗಳಿಗೆ ಸಿಗುವಂತಾಗಬೇಕೆಂದು ಕರ್ನಾಟಕ ರಾಜ್ಯ ಅರಣ್ಯ ನಿಗಮದ ಉಪಾಧ್ಯಕ್ಷೆ ಮಾಂಗೇರ ಪದ್ಮಿನಿ ಪೊನ್ನಪ್ಪ ಅಭಿಪ್ರಾಯಪಟ್ಟರು. ಕಣ್ಣಂಗಾಲ ಗ್ರಾಮ ಪಂಚಾಯ್ತಿಯ ಸಭಾಂಗಣದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮ ದಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಅರಣ್ಯ ನಿಗಮದಿಂದ ಬಡ ಕುಟುಂಬಗಳಿಗೆ ಉಚಿತವಾಗಿ ಗ್ಯಾಸ್ ಸಿಲಿಂಡರ್ ವಿತರಿಸಿ ಪದ್ಮಿನಿ ಪೊನ್ನಪ್ಪ ಮಾತನಾಡಿದರು.

ಮುಂದಿನ ದಿನದಲ್ಲಿ ಎಲ್ಲಾ ಪಂಚಾಯ್ತಿಯಲ್ಲಿ ಫಲಾನುಭವಿಗಳನ್ನು ಗುರುತಿಸಿ ಸವಲತ್ತುಗಳನ್ನು ಹಂತ ಹಂತವಾಗಿ ವಿತರಿಸಲಾಗುವದು ಎಂದರು.

ಕಣ್ಣಂಗಾಲ ವಲಯ ಕಾಂಗ್ರೆಸ್ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮನೋಜ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕಾಂಗ್ರೆಸ್ ಮುಖಂಡರುಗಳಾದ ಹಿರಿಯ ವಕೀಲ ದೇವಲಿಂಗಯ್ಯ, ವಕ್ಫ್ ಬೋರ್ಡ್ ಉಪಾಧ್ಯಕ್ಷ ಆಲೀರ ಎರ್ಮು ಹಾಜಿ, ಡಿಸಿಸಿ ಉಪಾಧ್ಯಕ್ಷ ಪಿ.ಕೆ. ಪೊನ್ನಪ್ಪ, ಗೋಣಿಕೊಪ್ಪ ನಗರ ಕಾಂಗ್ರೆಸ್ ಅಧ್ಯಕ್ಷ ಅರವಿಂದ್ ಕುಟ್ಟಪ್ಪ, ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಸದಸ್ಯ ಜೆ.ಕೆ. ಸೋಮಣ್ಣ, ಮುರುಗ (ಕಾಟಿ) ಸೇರಿದಂತೆ ಇನ್ನಿತರರು ಹಾಜರಿದ್ದರು. ಪಂಚಾಯಿತಿ ಪಿ.ಡಿ.ಓ. ಪೂಣಚ್ಚ ಸ್ವಾಗತಿಸಿದರು. ಸದಸ್ಯರಾದ ಗೋಪಾಲಕೃಷ್ಣ ಪ್ರಾಸ್ತವಿಕವಾಗಿ ಮಾತನಾಡಿದರು.