ಮಡಿಕೇರಿ, ಏ. 25: ಮಡಿಕೇರಿಯಲ್ಲಿ ನಿರ್ಮಿಸಲಾಗುತ್ತಿರುವ ಕೊಡವ ಹೆರಿಟೇಜ್ ಸೆಂಟರ್ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಕದ್ದಣಿಯಂಡ ಹರೀಶ್ ಬೋಪಣ್ಣ ಅವರು ಜಿಲ್ಲಾಧಿಕಾರಿ ರಿಚರ್ಡ್ ವಿನ್ಸೆಂಟ್ ಡಿಸೋಜ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಬಗ್ಗೆ ವಸ್ತುಸ್ಥಿತಿಯನ್ನು ಅವಲೋಕಿಸಿದ ಅವರು ಜಿಲ್ಲಾಧಿಕಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರೊಂದಿಗೆ ಚರ್ಚಿಸಿ ಸಚಿವರಿಗೆ ಈ ಬಗ್ಗೆ ವಿವರ ನೀಡಲು ಮಾಹಿತಿ ಪಡೆದುಕೊಂಡರು. ಈ ಕುರಿತು ಇತ್ತೀಚೆಗೆ ‘ಶಕ್ತಿ’ಯಲ್ಲಿ ವರದಿ ಪ್ರಕಟಗೊಂಡಿದ್ದನ್ನು ಸ್ಮರಿಸಬಹುದು.