ಸೋಮವಾರಪೇಟೆ, ಏ. 25: ನಗರದ ಚೌಡೇಶ್ವರಿ ಬ್ಲಾಕ್‍ನಲ್ಲಿರುವ ಶ್ರೀ ಚೌಡೇಶ್ವರಿ ದೇವರ 17ನೇ ವರ್ಷದ ವಾರ್ಷಿಕ ಮಹಾ ಪೂಜೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿತು.
ಬೆಳಗ್ಗಿನಿಂದಲೇ ದೇವಾಲಯದಲ್ಲಿ ವಿವಿಧ ಪೂಜಾ ಕಾರ್ಯಗಳು, ಹರಕೆ ಸಮರ್ಪಣೆ ನಡೆಯಿತು. ಮಧ್ಯಾಹ್ನ ಮಹಾಮಂಗಳಾರತಿ ನಂತರ ಸಾವಿರಾರು ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ದೇವಾಲಯ ಸಮಿತಿ ಪದಾಧಿಕಾರಿಗಳು ಪೂಜೋತ್ಸವದ ಯಶಸ್ಸಿಗೆ ಶ್ರಮಿಸಿದರು.