ಮಡಿಕೇರಿ, ಏ. 28: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ತಾ. 29 ರಂದು (ಇಂದು) ಬೆಳಿಗ್ಗೆ 11.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತ್ಯುತ್ಸವ ಆಚರಣೆ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ, ಶಾಸಕರಾದ ಎಂ.ಪಿ. ಅಪ್ಪಚ್ಚುರಂಜನ್, ಕೆ.ಜಿ. ಬೋಪಯ್ಯ, ಎಂ.ಪಿ. ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ವಿರೋಧ ಪಕ್ಷದ ಮುಖ್ಯ ಸಚೇತಕÀ ಕ್ಯಾಪ್ಟನ್ ಗಣೇಶ್ ಕಾರ್ನಿಕ್, ಜಿ.ಪಂ. ಅಧ್ಯಕ್ಷÀ ಬಿ.ಎ. ಹರೀಶ್, ಸಂಸದ ಪ್ರತಾಪ್ ಸಿಂಹ, ಕರ್ನಾಟಕ ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಟಿ.ಪಿ.ರಮೇಶ್, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಅಧಕ್ಷೆ ಎಂ.ಪದ್ಮಿನಿ ಪೊನ್ನಪ್ಪ, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷÀ ಬಿ.ಎಸ್. ಲೋಕೇಶ್ ಸಾಗರ್, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ವೀರಾಜಪೇಟೆ ತಾ. ಅರಮೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿ, ಕಲ್ಲುಮಠದ ಮಹಾಂತ ಸ್ವಾಮಿ, ಕಿರುಕೊಡ್ಲಿ ಮಠದ ಸದಾಶಿವಸ್ವಾಮಿ, ಮುದ್ದಿನಕಟ್ಟೆ ಮಠದ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಶಿಡಿಗಳಲೆ ಮಠದ ಇಮ್ಮಡಿ ಶಿವಲಿಂಗ ಸ್ವಾಮಿ, ತೊರೆನೂರು ಮಠದ ಮಲ್ಲೇಶ ಸ್ವಾಮಿ, ಸೋಮವಾರಪೇಟೆ ವಿರಕ್ತಮಠದ ವಿಶ್ವೇಶ್ವರ ಸ್ವಾಮಿಗಳು, ವೀರಶೈವ ಮಹಾಸಭಾದ ಅಧ್ಯಕ್ಷ ಡಿ.ಬಿ.ಧರ್ಮಪ್ಪ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷÀ ಎಸ್.ಮಹೇಶ್ ಇತರರು ಪಾಲ್ಗೊಳ್ಳಲಿದ್ದಾರೆ. ಚಿ.ನಾ. ಸೋಮೇಶ್ ಅವರು ಉಪನ್ಯಾಸ ನೀಡಲಿದ್ದಾರೆ. ಮೈಸೂರಿನ ಸುಮುಖ್ ಆರ್. ಪ್ರಸಾದ್ ಹಾಗೂ ನೀತೂ ನೀನಾದ್ ವಚನ ಗಾಯನ ಮಾಡಲಿದ್ದಾರೆ.