ಸೋಮವಾರಪೇಟೆ,ಏ.28: ಸಮೀಪದ ಗಣಗೂರು ಗ್ರಾಮದ ಶಾಲಾ ಮೈದಾನದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಮುಕ್ತ ಟೆನ್ನಿಸ್‍ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಕಲ್ಕಂದೂರಿನ ರೈಸಿಂಗ್ ಸ್ಟಾರ್ ತಂಡವು ಐಗೂರಿನ ಸತೀಶ್ ಪ್ರೆಂಡ್ಸ್ ತಂಡವನ್ನು ಮಣಿಸುವ ಮೂಲಕ ಆಕರ್ಷಕ ಟ್ರೋಫಿಯೊಂದಿಗೆ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ತೃತೀಯ ಸ್ಥಾನವನ್ನು ಜೈ ಭೀಮ್ ತಂಡ ಪಡೆದುಕೊಂಡಿತು. ಥ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಶ್ವೇತ ಮತ್ತು ತಂಡ, ದ್ವಿತೀಯ ಸ್ಥಾನವನ್ನು ವನಿತಾ ಮತ್ತು ತಂಡದವರು ಪಡೆದರು. ವಿಜೇತ ತಂಡಕ್ಕೆ ನಗದು ಬಹುಮಾನದೊಂದಿಗೆ ಆಕರ್ಷಕ ಟ್ರೋಫಿ ನೀಡಲಾಯಿತು.

ಬಹುಮಾನ ವಿತರಣೆ ಸಂದರ್ಭ ಕೊಡಗು ಜಿಲ್ಲಾ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ದೇವದಾಸ್, ಡಾ|| ಸತೀಶ್, ದಲಿತ ಮುಖಂಡ ಜಯಪ್ಪ ಹಾನಗಲ್, ನಿವೃತ್ತ ಅಪರ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಸಿದ್ದಪ್ಪ, ತಾಲೂಕು ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ಎಚ್.ಜೆ. ಜವರಪ್ಪ, ಉದ್ಯಮಿಗಳಾದ ನಾಪಂಡ ಮುತ್ತಪ್ಪ, ಕರ್ನಾಟಕ ರೈತ ಸಂಘದ ಕಾರ್ಯದರ್ಶಿ ನಿರ್ವಾಣಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯ ಶ್ರೀನಿವಾಸ್, ವೃತ್ತ ನಿರೀಕ್ಷಕ ಪರಶಿವಮೂರ್ತಿ, ವಕೀಲರಾದ ಜಯೇಂದ್ರ, ತಾಲೂಕು ಪಂಚಾಯಿತಿ ಸದಸ್ಯೆ ಸವಿತಾ ಈರಪ್ಪ, ಗಣಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತಾ ಮತ್ತಿತರರು ಉಪಸ್ಥಿತರಿದ್ದರು.