ಮಡಿಕೇರಿ, ಏ. 28: ನಗರಸಭೆ ವತಿಯಿಂದ ಸ್ವಚ್ಛ ಭಾರತ ಅಭಿಯಾನದಡಿ ಗೋಡೆ ಬರಹ, ಬೀದಿ ನಾಟಕ, ಹಸಿ ಮತ್ತು ಒಣ ಕಸ ಬೇರ್ಪಡಿಸುವ ಬಗ್ಗೆ ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆ ಮತ್ತಿತರ ಮಾಹಿತಿ, ಶಿಕ್ಷಣ ಮತ್ತು ಸಹಭಾಗಿತ್ವ (ಐಇಸಿ) ಕಾರ್ಯಕ್ರಮಕ್ಕೆ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಚಾಲನೆ ನೀಡಿದರು. ನಗರದ ಗಾಂಧಿ ಮೈದಾನದ ಬಳಿ ಸ್ವಚ್ಛ ಭಾರತ ಅಭಿಯಾನದಡಿ ಏರ್ಪಸಲಾಗಿದ್ದ ಗೋಡೆ ಬರಹ ಮಹಾತ್ಮ ಗಾಂಧೀಜಿಯವರ ಕನ್ನಡಕ ಚಿತ್ರ ಬಿಡಿಸುವ ಮೂಲಕ ಶಾಸಕರು ಮಾತನಾಡಿ, ಶಾಸಕರು ನಗರಸಭೆ ವತಿಯಿಂದ ಸ್ವಚ್ಛ ಭಾರತ ಅಭಿಯಾನದಡಿ ಗೋಡೆ ಬರಹ, ಬೀದಿ ನಾಟಕ, ಹಸಿ ಮತ್ತು ಒಣಕಸ ಬೇರ್ಪಡಿಸುವ ಸಂಬಂಧ ಪ್ರಬಂಧ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಹೀಗೆ ವಿವಿಧ ಕಾರ್ಯ ಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. ಮಡಿಕೇರಿ ನಗರ ಮತ್ತಷ್ಟು ಸ್ವಚ್ಛವಾಗಿರುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸು ವಂತಾಗಬೇಕು ಎಂದು ಅವರು ಸಲಹೆ ಮಾಡಿದರು.

ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಮಾತನಾಡಿ, ಸ್ವಚ್ಛ ಭಾರತ ಅಭಿಯಾನದಡಿ ವಿವಿಧ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಗರಸಭೆ ಪೌರಾಯುಕ್ತೆ ಬಿ. ಶುಭ ಮಾತನಾಡಿದರು. ನಗರಸಭೆ ಉಪಾಧ್ಯಕ್ಷ ಟಿ.ಎಸ್.ಪ್ರಕಾಶ್, ಸ್ಥಾಯಿ ಸಮಿತಿ ಅಧ್ಯಕ್ಷÀ ಕೆ.ಎಸ್. ರಮೇಶ್, ಸದಸ್ಯರಾದ ಪಿ.ಡಿ. ಪೊನ್ನಪ್ಪ, ಮನ್ಸೂರ್, ನಗರಸಭೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಸಂತ್ ಕುಮಾರ್, ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ರಮೇಶ್, ಬಷೀರ್, ರಾಜಶೇಖರ್ ಇತರರು ಇದ್ದರು.