ಮಡಿಕೇರಿ, ಮೇ 6: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ 10ನೇ ತರಗತಿಯ ನಂತರ ತೆಗೆದುಕೊಳ್ಳಬೇಕಾದ ಶೈಕ್ಷಣಿಕ ನಿರ್ಧಾರ ವಿದ್ಯಾರ್ಥಿಗಳು ಹಾಗೂ ಪೆÇೀಷಕರಿಗೆ ಸವಾಲಾಗಿದ್ದು, ಇದನ್ನು ಸರಳೀಕರಣಗೊಳಿಸುವದಕ್ಕಾಗಿ ಮೇ 8 ರಂದು ಶ್ರೀ ಅರಮೇರಿ ಕಳಂಚೇರಿ ಮಠದ ಎಸ್‍ಎಂಎಸ್ ವಿದ್ಯಾಪೀಠದ ಆಶ್ರಯದಲ್ಲಿ “ಎಸ್‍ಎಸ್‍ಎಲ್‍ಸಿ ನಂತರ ಏನು” ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದೆ ಎಂದು ಮಠಾಧೀಶ ಶ್ರೀಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಹಾಗೂ ಶೈಕ್ಷಣಿಕ ಕಾಳಜಿ ಹೊಂದಿರುವ ಮಠವು 10ನೇ ತರಗತಿಯ ನಂತರ ಯಾವ ರೀತಿಯ ಶೈಕ್ಷಣಿಕ ಹೆಜ್ಜೆಯನ್ನಿರಿಸಬೇಕು ಎನ್ನುವದನ್ನು ಮನವರಿಕೆ ಮಾಡಿಕೊಡಲು ವಿಚಾರ ಸಂಕಿರÀಣ ನಡೆಸುತ್ತಿದೆ ಎಂದು ತಿಳಿಸಿದರು.

ಮೇ 8 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರವರೆಗೆ ತಮ್ಮ ಅಧ್ಯಕ್ಷತೆಯಲ್ಲಿ ಮಠÀದ ಆವರಣದಲ್ಲಿ ನಡೆಯುವ ವಿಚಾರ ಸಂಕಿರಣದಲ್ಲಿ ಮೈಸೂರಿನ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಮಹಾ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ| ನಿತಿನ್ ಗಣಪತಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಹಾಗೂ ಪೆÇೀಷಕರಿಗೆ ಮಾರ್ಗದರ್ಶನ ನೀಡಲಿದ್ದಾರೆ ಎಂದರು.

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವದು ಎಸ್‍ಎಂಎಸ್ ವಿದ್ಯಾಪೀಠದ ಉದ್ದೇಶವಾಗಿದ್ದು, ಕಳೆದ ಐದು ವರ್ಷಗಳಿಂದ ಸಂಸ್ಥೆ ಶೇ. 100 ರಷ್ಟು ಫಲಿತಾಂಶ ಗಳಿಸುತ್ತಿದೆ. ಸುಮಾರು 600 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಎರಡು ವರ್ಷಗಳ ಹಿಂದೆ ವಸತಿ ನಿಲಯವನ್ನು ಕೂಡ ಸ್ಥಾಪಿಸಲಾಗಿದೆ.

ಮುಂದಿನ ಶೈಕ್ಷಣಿಕ ವರ್ಷದಿಂದ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜನ್ನು ಆರಂಭಿಸಲು ಸರ್ಕಾರದ ಅನುಮತಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಸ್ವಾಮೀಜಿ ತಿಳಿಸಿದರು.

ವಿದ್ಯಾಪೀಠದ ಆಡಳಿತಾಧಿಕಾರಿ ಮಧುಸೂದನ್ ಮಾತನಾಡಿ, 15 ವರ್ಷಗಳ ಹಿಂದೆ ಸ್ಥಾಪನೆಯಾದ ವಿದ್ಯಾಪೀಠ ಗ್ರಾಮೀಣ ವಿದ್ಯಾರ್ಥಿಗಳಿಗೆ ನಾಗರಿಕತೆ ಮತ್ತು ವೈಜ್ಞಾನಿಕತೆಯ ಶಿಕ್ಷಣವನ್ನು ನೀಡುತ್ತಿದೆ ಎಂದರು.

ವಿದ್ಯಾಪೀಠದ ಹಿತೈಷಿ ಅಬ್ದುಲ್ ರೆಹೆಮಾನ್ ಮಾತನಾಡಿ, ಮಠವು ಮೌಲ್ಯವರ್ಧಿತ ಶಿಕ್ಷಣವನ್ನು ನೀಡುವ ಮೂಲಕ ಶೇ.100 ರಷ್ಟು ಫಲಿತಾಂಶಗಳಿಸುವಲ್ಲಿ ಯಶಸ್ವಿಯಾಗಿದೆ ಎಂದರು.

ವಿಚಾರ ಸಂಕಿರಣದಲ್ಲಿ ಪಾಲ್ಗೊಳ್ಳಲು ಇಚ್ಛಿಸುವವರು ಈ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. 08274 254777, 9480747970, 9743083267.