ವೀರಾಜಪೇಟೆ, ಮೇ 9: ವೀರಾಜಪೇಟೆಯ ಜೂನಿಯರ್ ಕಾಲೇಜು ಮೈದಾನದಲ್ಲಿ ತಾಲೂಕು ಸವಿತಾ ಸಮಾಜದ ಕ್ರೀಡಾ ಹಾಗೂ ಸಾಂಸ್ಕøತಿಕ ಸಮಿತಿಯಿಂದ ಎರಡು ದಿನಗಳಿಂದ ಹಮ್ಮಿಕೊಂಡಿದ್ದ ಟೆನ್ನಿಸ್ ಬಾಲ್ ಪಂದ್ಯಾಟದಲ್ಲಿ ಎಂ.ಎನ್. ಬಾಯ್ಸ್ ತಂಡ 3 ವಿಕೆಟ್‍ಗಳ ನಷ್ಟಕ್ಕೆ 117 ರನ್ನು ಗಳಿಸಿ ಪ್ರಥಮ ಸ್ಥಾನ ಪಡೆದು ಟ್ರೋಫಿ ಹಾಗೂ ರೂ 10 ಸಾವಿರ ನಗದನ್ನು ತನ್ನದಾಗಿಸಿ ಕೊಂಡಿತು.ವೀರಾಜಪೇಟೆಯ ಎಂ.ವೈ.ಸಿ.ಸಿ. ತಂಡ 5 ವಿಕೆಟ್ ನಷ್ಟಕ್ಕೆ 115 ರನ್ನು ಗಳಿಸಿ ದ್ವಿತೀಯ ಸ್ಥಾನ ಪಡೆಯಿತು. ಪಂದ್ಯಾಟದಲ್ಲಿ ಸಮುದಾಯಕ್ಕೆ ಸೀಮಿತಗೊಂಡಂತೆ ಒಟ್ಟು 17 ತಂಡಗಳು ಭಾಗವಹಿಸಿದ್ದವು.

ಸಮರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಸವಿತಾ ಸಮಾಜದ ಆಚಾರ ವಿಚಾರ ಸಂಸ್ಕøತಿ, ಪರಂಪರೆ

(ಮೊದಲ ಪುಟದಿಂದ) ಶಾಶ್ವತವಾಗಿ ಉಳಿಯಲು ಸಮುದಾಯದ ಕ್ರೀಡಾ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳು ಸಹಕಾರಿಯಾಗಲಿದೆ. ಎಂದರು.

ಜಿಲ್ಲಾ ಪಂಚಾಯಿತಿಯ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ಮೂಕೊಂಡ ಶಶಿ ಸುಬ್ರಮಣಿ ಮಾತನಾಡಿ, ಸಮುದಾಯ ಬಾಂಧವರು ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಕ್ರೀಡೆ ಇತರ ಉತ್ಸವಗಳನ್ನು ಆಚರಿಸುವದರ ಮೂಲಕ ಪ್ರಗತಿಯತ್ತ ಸಾಗಬೇಕು ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ ಮಾತನಾಡಿ ಸಮುದಾಯದ ಯುವಕರು ದುಶ್ಚಟಗಳಿಂದ ದೂರವಿದ್ದು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಬೇಕು ಎಂದರು.

ಸಭೆಯನ್ನುದ್ದೇಶಿಸಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಇ.ಸಿ. ಜೀವನ್, ಉಪಾಧ್ಯಕ್ಷೆ ತಸ್ನೀಂ ಅಕ್ತರ್, ಸರ್ವಜನಾಂಗ ಸಂಘದ ಅಧ್ಯಕ್ಷ ಪಿ.ಎ.ಮಂಜುನಾಥ್ ಮಾತನಾಡಿದರು.

ಜಯಕರ್ನಾಟಕ ಸಂಘದ ತಾಲೂಕು ಅಧ್ಯಕ್ಷ ಮಂಡೇಟಿರ ಅನಿಲ್ ಅಯ್ಯಪ್ಪ ಉಪಸ್ಥಿತರಿದ್ದರು.

ಸವಿತಾ ಸಮಾಜದ ಜಿಲ್ಲಾ ಸಮಿತಿ ಅಧ್ಯಕ್ಷ ಎಚ್.ಎನ್.ವೆಂಕಟೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘಟನೆಯ ಶಾಖೆಗಳಿರುವಲ್ಲಿ ನಿವೇಶನಗಳನ್ನು ಕೊಡಿಸಲು ಜನಪ್ರತಿನಿಧಿಗಳು ಮುಂದಾಗಬೇಕು ಎಂದು ವಿನಂತಿಸಿದರು.

ಇದೇ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಅಧ್ಯಾಪಕ ಬಿ.ಆರ್. ಸತೀಶ್, ಕಾಶಿ ಕಾಳಪ್ಪ, ಮಹೇಶ್ ವೀಣಾ ಉಮೇಶ್, ಅರುಣ್ ಇವರುಗಳಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು. ವಿಜೇತರಿಗೆ ಅತಿಥಿಗಳು ಬಹುಮಾನ ವಿತರಿಸಿದರು.

ಪ್ರಾರಂಭದಲ್ಲಿ ಸೀಮಾ ಸುಭಾಷ್ ಪ್ರಾಸ್ತಾವಿಕ ಮಾತನಾಡಿದರು. ಅಧ್ಯಾಪಕ ಬಿ.ಆರ್ ಸತೀಶ್ ಹಾಗೂ ಯುವರಾಜ್ ನಿರೂಪಿಸಿದರು.

ತಾಲೂಕು ಸಮಿತಿ ಅಧ್ಯಕ್ಷ ಕೆ.ಟಿ.ವೆಂಕಟೇಶ್, ಉಪಾಧ್ಯಕ್ಷ ಪಿ ರಾಜ, ಪ್ರಧಾನ ಕಾರ್ಯದರ್ಶಿ ಈಶ್ವರ್, ಕಾರ್ಯದರ್ಶಿ ಅನಿಲ್ ಕುಮಾರ್ ಪದಾಧಿಕಾರಿಗಳಾದ ಬಿ.ಎಂ.ಕಿರಣ್, ಬಿ.ಆರ್.ಸುಭಾಷ್, ಸುನಿಲ್ ಸೋಮಯ್ಯ ಇತರರು ಹಾಜರಿದ್ದರು. ಜಯ ಕರ್ನಾಟಕ ಸಂಘಟನೆಯು ಟ್ರೋಫಿಗಳನ್ನು ನೀಡಿತು.