ಬೆಂಗಳೂರು, ಮೇ. 9:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಂಸದ ಎಚ್ ವಿಶ್ವನಾಥ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರಿಂದಾಗಿ ತಾನು ಕಾಂಗ್ರೆಸ್ ತೊರೆಯುವ ಪರಿಸ್ಥಿತಿ ಬಂದಿದೆ ಎಂದು ಆರೋಪಿಸಿದ್ದಾರೆ.ಸಿಎಂ ಸಿದ್ದರಾಮಯ್ಯ ವಿರುದ್ಧ ನೂತನ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಿಗೆ ವಿಶ್ವನಾಥ್ ಅವರು ಸುದೀರ್ಘ ಪತ್ರ ಬರೆದಿದ್ದು, ಇದೇ ಪರಿಸ್ಥಿತಿ ಮುಂದುವರೆದರೆ ತಾನೂ ಸೇರಿದಂತೆ ಹಲವು ನಾಯಕರು ಪಕ್ಷ ತೊರೆಯುವದು ನಿಶ್ಚಿತ ಎಂದು ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ಮುಖಂಡರ, ಸಚಿವರ. ಶಾಸಕರ ಹಾಗೂ ಕಾರ್ಯಕರ್ತರ ಅಭಿಪ್ರಾಯ ಆಲಿಸಲು ನಗರದಲ್ಲಿ ಮೊಕ್ಕಾಂ ಹೂಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರನ್ನು ಕುಮಾರಕೃಪ ಅತಿಥಿ ಗೃಹದಲ್ಲಿ ಭೇಟಿ ಮಾಡಿದ ವಿಶ್ವನಾಥ್ ಅವರು, ಸಿಎಂ ವಿರುದ್ಧ ತಾವು ಬರೆದ ಮೂರು ಪುಟಗಳ ಪತ್ರವನ್ನು ಅವರಿಗೆ ನೀಡಿದ್ದಾರೆ.

(ಮೊದಲ ಪುಟದಿಂದ) ಸಿದ್ದರಾಮಯ್ಯ ಅವರ ವರ್ತನೆ ಸರಿಯಿಲ್ಲ. ಅವರ ನಡವಳಿಕೆ ಹಾಗೂ ವರ್ತನೆ ಯಿಂದಾಗಿ ಹಲವು ಹಿರಿಯ ಕಾಂಗ್ರೆಸ್ ನಾಯಕರು ಪಕ್ಷ ತೊರೆದಿದ್ದಾರೆ. ತಾನು ಎಐಸಿಸಿ, ಕೆಪಿಸಿಸಿ ಸದಸ್ಯ ನಾಗಿದ್ದರೂ ಪಕ್ಷದ ಕಾರ್ಯ ಕ್ರಮಗಳಿಗೆ ಆಹ್ವಾನ ನೀಡುತ್ತಿಲ್ಲ. ಶೋಕಾಸ್ ನೊಟೀಸ್ ನೀಡಿ ತನ್ನ ಬಾಯಿ ಮುಚ್ಚಿಸಿದ್ದಾರೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಅಲ್ಲದೆ ಇದಕ್ಕೆ ಸಿದ್ದರಾಮಯ್ಯ ಅವರೇ ನೇರ ಕಾರಣ ಎಂದು ಆರೋಪಿಸಿದ್ದಾರೆ. ಸಿದ್ದರಾಮಯ್ಯ ಸಂಪುಟ ದಲ್ಲಿರುವ ಹಲವು ಸಚಿವರು ಕ್ರಿಮಿನಲ್ ಆರೋಪ ಎದುರಿಸುತ್ತಿದ್ದಾರೆ. ತಾನು ನಾಲ್ಕು ದಶಕಗಳಿಂದ ಪಕ್ಷಕ್ಕೆ ದುಡಿದಿದ್ದೇನೆ, ಈಗ ಸಂಪೂರ್ಣ ವಾಗಿ ತÀನ್ನನ್ನು ಕಡೆಗಣಿಸಲಾಗಿದೆ. ಸರ್ಕಾರದ ಸಾಧನೆಯಿಂದ ಉಪ ಚುನಾವಣೆ ಯಲ್ಲಿ ಗೆಲುವು ಲಭಿಸಲಿಲ್ಲ, ವಿಪಕ್ಷಗಳ ವೈಫಲ್ಯದಿಂದ ಗೆಲುವು ಸಿಕ್ಕಿದೆ ಅಷ್ಟೆ ಎಂದು ಪತ್ರದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.