ಮಡಿಕೇರಿ, ಮೇ 10: ಐ.ಎ.ಎಸ್ ಮತ್ತು ಕೆ.ಎ.ಎಸ್ ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2017-18ನೇ ಸಾಲಿನಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ಜಿಲ್ಲೆಯ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ತಾ. 20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ನ್ನು ನೋಡಬಹುದು. ಹಾಗೂ ದೂ.ಸಂಖ್ಯೆ 080-65970009 ಹಾಗೂ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಮ್ಯಾನ್ಸ್ ಕಾಂಪೌಂಡು ಹತ್ತಿರ, ಮಡಿಕೇರಿ ಕಚೇರಿಯನ್ನು ಹಾಗೂ ದೂ.ಸಂ: 08272-225628 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.
ಮಡಿಕೇರಿ: ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ವತಿಯಿಂದ 2017-18ನೇ ಸಾಲಿನಲ್ಲಿ ಅನುಷ್ಠಾನ ಮಾಡುವ ವಿವಿಧ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ಯೋಜನೆ, ಹೈನುಗಾರಿಕೆ, ಐ.ಎಸ್.ಬಿ. ಯೋಜನೆ, ಗಂಗಾ ಕಲ್ಯಾಣ, ವೈಯಕ್ತಿಕ ಕೊಳವೆ ಬಾವಿ ಯೋಜನೆ, ತೆರೆದ ಬಾವಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ(ಕಿರು ಸಾಲ), ಮಹಿಳಾ ಸಮೃದ್ಧಿ ಯೋಜನೆ, ಮೈಕ್ರೋ ಫೈನಾನ್ಸ್ ಯೋಜನೆ, ನೇರಸಾಲ ಯೋಜನೆ, ಭೂ ಒಡೆತನ ಯೋಜನೆ, ಅಂಗವಿಕಲರ ನೆರವು.
ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಇಚ್ಚಿಸುವ ಅರ್ಜಿದಾರರು ಕಚೇರಿಯಿಂದ ಉಚಿತವಾಗಿ ಅರ್ಜಿಗಳನ್ನು ಪಡೆದು ಅರ್ಜಿಯ ಜೊತೆ ಯೋಜನೆಗೆ ತಕ್ಕಂತೆ ಅಗತ್ಯವಾದ ದಾಖಲಾತಿಗಳಾದ ಫೋಟೋ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್, ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಯೋಜನಾ ವರದಿ, ಕೊಟೇಷನ್ ಇತ್ಯಾದಿ, ಇತರೆ ಉದ್ದೇಶಗನುಗುಣವಾಗಿ ದಾಖಲಾತಿಗಳನ್ನು ಸಲ್ಲಿಸಬೇಕಾಗಿರುತ್ತದೆ ಹಾಗೂ ಅಂಗವಿಕಲರು ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅರ್ಜಿದಾರರು 18 ರಿಂದ 60 ವರ್ಷದೊಳಗಿರಬೇಕು. ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿದಾರರ ಅಥವಾ ಕುಟುಂಬದ ಯಾವದೇ ಸದಸ್ಯರು ಸರ್ಕಾರಿ, ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದವರಿಗೆ ರೂ. 98,000 ಹಾಗೂ ನಗರ ಪ್ರದೇಶದವರಿಗೆ ರೂ. 1,20,000 ಲಕ್ಷ ಗಳು ಇರಬೇಕು. ಹಾಗೂ ಪರಿಶಿಷ್ಟ ಪಂಗಡದ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದವರಿಗೆ ರೂ.1,50,000 ಹಾಗೂ ನಗರ ಪ್ರದೇಶದವರಿಗೆ ರೂ. 2 ಲಕ್ಷ ಇರಬೇಕು. ಅಲ್ಲದೇ ಈ ಹಿಂದೆ ನಿಗಮದಿಂದ ಸಾಲ ಸೌಲಭ್ಯ ಪಡೆದವರಿಗೆ ಪುನಃ ಅರ್ಜಿ ಸಲ್ಲಿಸಲು ಅವಕಾಶವಿರುವದಿಲ್ಲ.
ಅರ್ಜಿಯನ್ನು ಜಿಲ್ಲಾ ಕಚೇರಿಯಿಂದ ಹಾಗೂ ತಾಲೂಕು ಮಟ್ಟದ ಸಮಾಜ ಕಲ್ಯಾಣ ಇಲಾಖೆಯಿಂದ ಉಚಿತವಾಗಿ ಪಡೆದು ದಾಖಲಾತಿಗಳೊಂದಿಗೆ ದ್ವಿ ಪ್ರತಿಯಲ್ಲಿ ಜಿಲ್ಲಾ ಕಚೇರಿಗೆ ತಾ. 25 ರೊಳಗೆ ಸಲ್ಲಿಸುವದು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವದಿಲ್ಲ. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಹೊಸ ಬಡಾವಣೆ, ರೇಸ್ ಕೋರ್ಸ್, ಮಡಿಕೇರಿ, ಕೊಡಗು ಜಿಲ್ಲೆ ಇವರನ್ನು ಹಾಗೂ ದೂ.ಸಂ.08272-228857 ನ್ನು ಸಂಪರ್ಕಿಸಬಹುದು ಎಂದು ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.