ಮಡಿಕೇರಿ, ಮೇ 10 : ದಿಡ್ಡಳ್ಳಿಯ ನಿರಾಶ್ರಿತ ಆದಿವಾಸಿಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಬದುಕಲು ನೆಲೆ ಕಲ್ಪಿಸಿದ್ದು, ಸ್ವಂತ ಸೂರನ್ನು ಹೊಂದುವ ಲೈನ್ ಮನೆÀಗಳಲ್ಲಿ ವಾಸವಾಗಿದ್ದ ಬಡವರ್ಗದ ಕನಸು ನನಸಾಗಿದೆ ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘÀಟನೆಯ ಜಿಲ್ಲಾ ಸಂಯೋಜಕ ತೆನ್ನಿರ ಮೈನ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ರಾಜಕೀಯ ಲಾಭಕ್ಕಾಗಿ ಜಿಲ್ಲೆಯ ಬಿಜೆಪಿ ಮುಖಂಡರು ಹಾಗೂ ಪ್ರಚಾರಕ್ಕಾಗಿ ನಕಲಿ ಹೋರಾಟಗಾರರು ಸಮಸ್ಯೆಯನ್ನು ಮತ್ತಷ್ಟು ಉಲ್ಬಣಗೊಳಿಸಿದ್ದರು ಎಂದು ಆರೋಪಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಮ್ ಅವರು ಕಾನೂನಿನ ಚೌಕಟ್ಟಿನಲ್ಲಿ ನಿರಾಶ್ರಿತರಿಗೆ ನ್ಯಾಯ ಒದಗಿಸುವಲ್ಲಿ ಸಫಲರಾಗಿದ್ದಾರೆ. ಅವರೊಂದಿಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷÀ ಟಿ.ಪಿ. ರಮೇಶ್ ಸರ್ಕಾರದ ಗಮನ ಸೆಳೆದು ಬಡವರಿಗೆ ಸೂರು ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಕಂದಾಯ ಸಚಿವÀ ಕಾಗೋಡು ತಿಮ್ಮಪ್ಪ ಅವರ ಸಲಹೆಯಂತೆ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಕಾರ್ಯಕರ್ತರು ಪ್ರತಿ ಗ್ರಾಮದಲ್ಲಿ ಮನೆ ಹಾಗೂ ನಿವೇಶನ ಇಲ್ಲದ ಬಡವರನ್ನು ಗುರುತಿಸುವ ಕಾರ್ಯವನ್ನು ಮಾಡಲಿದೆ. ಇದರ ಪಟ್ಟಿಯನ್ನು ಜಿಲ್ಲಾ ಕಾಂಗ್ರೆಸ್ ಮುಖಂಡರ ಮೂಲಕ ಸರ್ಕಾರಕ್ಕೆ ಸಲ್ಲಿಸಿ ಕೊಡಗು ಜಿಲ್ಲೆಯನ್ನು ವಸತಿ ರಹಿತರ ಮುಕ್ತ ಜಿಲ್ಲೆಯನ್ನಾಗಿ ಮಾಡುವದಾಗಿ ಮೈನಾ ತಿಳಿಸಿದ್ದಾರೆ.