ಮಡಿಕೇರಿ, ಮೇ 11: ಗೌಡ ಫುಟ್‍ಬಾಲ್ ಅಕಾಡೆಮಿ ವತಿಯಿಂದ ತಾ. 12ರಿಂದ (ಇಂದಿನಿಂದ) ತಾ. 21ರವರೆಗೆ ಗೌಡ ಫುಟ್‍ಬಾಲ್ ಪಂದ್ಯಾಟವನ್ನು ಮರಗೋಡು ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಲಾಗಿದೆ.ಇಂದು ಬೆಳಿಗ್ಗೆ 9 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಮಡಿಕೇರಿ ನಗರಸಭಾ ಅಧ್ಯಕ್ಷೆ ಕೂಡಕಂಡಿ ಕಾವೇರಮ್ಮ ಸೋಮಣ್ಣ ಉದ್ಘಾಟನೆ ನೆರವೇರಿಸಲಿದ್ದಾರೆ. ಗೌಡ ಫುಟ್‍ಬಾಲ್ ಅಕಾಡೆಮಿ ಅಧ್ಯಕ್ಷ ಕಟ್ಟೆಮನೆ ಸಿದ್ದಾರ್ಥ್ ರಾಖೇಶ್ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೊಲ್ಯದ ಗಿರೀಶ್, ಮರಗೋಡು ಗ್ರಾ.ಪಂ. ಅಧ್ಯಕ್ಷ ಬಿದ್ರುಪಣೆ ಮೋಹನ್ ಕುಮಾರ್ ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ.