ಮಡಿಕೇರಿ, ಮೇ 10: ಬಾಲ ನ್ಯಾಯ (ಮಕ್ಕಳ ಪಾಲನಾ ಮತ್ತು ರಕ್ಷಣೆ) ಕಾಯ್ದೆ 2015 ಹಾಗೂ ಬಾಲ ನ್ಯಾಯ ಮಾದರಿ ನಿಯಮ 2016 ರನ್ವಯ ಪ್ರತಿ ಜಿಲ್ಲೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿ ಬಾಲ ನ್ಯಾಯ ಮಂಡಳಿಗಳನ್ನು ರಚಿಸಬೇಕಾಗಿರುತ್ತದೆ. ಮಕ್ಕಳ ಕಲ್ಯಾಣ ಸಮಿತಿಗಳು ಮತ್ತು ಬಾಲ ನ್ಯಾಯ ಮಂಡಳಿಗಳಿಗೆ 2017-2020 ರ ವರೆಗೆ 3 ವರ್ಷಗಳ ಕಾಲಾವಧಿಗಾಗಿ ಸದಸ್ಯತ್ವಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ನಮೂನೆ, ಸೂಚನೆಗಳು, ವಿಶೇಷ ಸೂಚನೆಗಳು, ದೃಢೀಕರಣಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್‍ಸೈಟ್ ಜತಿಛಿಜಞಚಿಡಿ.gov.iಟಿ ನಲ್ಲಿ ಲಭ್ಯವಿರುತ್ತದೆ. ಮಕ್ಕಳ ಕಲ್ಯಾಣ ಸಮಿತಿ ಮತ್ತು ಬಾಲ ನ್ಯಾಯ ಮಂಡಳಿಗಳಿಗೆ ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ನೋಂದಾಯಿತ ಅಂಚೆ ಮೂಲಕ ತಾ. 15 ರ ಸಂಜೆ 5.30 ರೊಳಗೆ ಸದಸ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿ, ಕೇರ್‍ಆಫ್ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೊದಲನೆಯ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ಬೀದಿ, ಬೆಂಗಳೂರು - 560001 ಇಲ್ಲಿಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ 080-22879381/82, 08272-228800 ದೂರವಾಣಿಯನ್ನು ಸಂಪರ್ಕಿಸಲು ಕೋರಲಾಗಿದೆ.