ಮಡಿಕೇರಿ, ಮೇ 15: ಮಂಗಳೂರು ವಿಶ್ವವಿದ್ಯಾನಿಲಯದ ‘ತುಳು ಪೀಠ’ ಇಲ್ಲಿ ಸಂಶೋಧನಾ ಸಹಾಯಕರಾಗಿ ಕಾರ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಸಂಪೂರ್ಣ ಅಂಚೆ ವಿಳಾಸದೊಂದಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಕನ್ನಡ ಸ್ನಾತಕೋತ್ತರ ಪದವಿ ಹೊಂದಿರುವ ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ವರ್ಗ, ಅನುಭವ, ದೂರವಾಣಿ ಸಂಖ್ಯೆ ಇತ್ಯಾದಿ ಸ್ವವಿವರಗಳುಳ್ಳ ಅರ್ಜಿ ಮತ್ತು ದಾಖಲೆಗಳ ಜೆರಾಕ್ಸ್ ಪ್ರತಿ ಮತ್ತು ಮೂಲ ದಾಖಲೆಗಳೊಂದಿಗೆ ತಾ. 17 ರಂದು ಬೆಳಿಗ್ಗೆ 9 ಗಂಟೆಗೆ ಕುಲಸಚಿವರ ಕಚೇರಿ, ಅಭಿವೃದ್ಧಿ ವಿಭಾಗ, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ-574199 ಇಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗತಕ್ಕದ್ದು. ವಿವರಗಳನ್ನು ವಿಶ್ವವಿದ್ಯಾನಿಲಯದ ವೆಬ್‍ಸೈಟ್ ತಿತಿತಿ.mಚಿಟಿgಚಿಟoಡಿeuಟಿiveಡಿsiಣಥಿ.ಚಿಛಿ.iಟಿ ನಿಂದಲೂ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.