ಮಡಿಕೇರಿ, ಮೇ 14: ಮಡಿಕೇರಿ ತಾಲೂಕು ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ತಾ. 16 ರಂದು ಬೆಳಿಗ್ಗೆ 11 ಗಂಟೆಯಿಂದ 1 ಗಂಟೆವರೆಗೆ ಮಡಿಕೇರಿ ಉಪವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಇಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತರವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುವದು. ಮಡಿಕೇರಿ ತಾಲೂಕು ವ್ಯಾಪ್ತಿಯ ಸಾರ್ವಜನಿಕರು, ವಿದ್ಯುತ್ ಗ್ರಾಹಕರ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವದು ಎಂದು ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.