ಮಡಿಕೇರಿ, ಮೇ 19: ಕಾಂಗ್ರೆಸ್ನ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಮೇ 21 ರಂದು ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರ 25 ನೇ ಸಂಸ್ಮರಣಾ ದಿನಾಚರಣೆ ನೆಲ್ಯಹುದಿಕೇರಿಯಲ್ಲಿ ನಡೆಯಲಿದೆ ಎಂದು ಸಂಘಟನೆಯ ಜಿಲ್ಲಾ ಪಂಚಾಯತ್ ಕ್ಷೇತ್ರ ಸಂಯೋಜಕರಾದ ಪಿ.ಎ. ಅಬ್ದುಲ್ ರಜಾóಕ್ ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು ಪಂಚಾಯತ್ ರಾಜ್ 1993 ರ ತಿದ್ದುಪಡಿಯ ರಜತ ಮಹೋತ್ಸವದ ಅಂಗವಾಗಿ ಗ್ರಾಮ ಸಂವಾದ ಕಾರ್ಯಕ್ರಮ ಅಂದು ಸಂಜೆ 5 ಗಂಟೆಗೆ ನಡೆಯಲಿದೆ ಎಂದು ಹೇಳಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ವೀಣಾಅಚ್ಚಯ್ಯ, ಜಿಲ್ಲಾ ಕಾಂಗ್ರೆಸ್ ಪ್ರಬಾರ ಅಧ್ಯಕ್ಷರಾದ ಟಿ.ಪಿ.ರಮೇಶ್, ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕರಾದ ತೆನ್ನಿರಾ ಮೈನಾ, ಜಿ.ಪಂ, ತಾ.ಪಂ, ಗ್ರಾ.ಪಂ ಸದಸ್ಯರುಗಳು, ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕಗಳ ಮುಖಂಡರುಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.