ಮಡಿಕೇರಿ, ಮೇ 19: ಅಮೃತ ಯುವ ಮೊಗೇರ ಸೇವಾ ಸಮಾಜದ ಸಿದ್ದಾಪುರ ಶಾಖೆ ವತಿಯಿಂದ ಪ್ರಥಮ ವರ್ಷದ ಮೊಗೇರ ಬಾಂಧವರ ರಾಜ್ಯಮಟ್ಟದ ಕ್ರೀಡಾಕೂಟದ ಉದ್ಘಾಟನೆ ತಾ. 20 ರಂದು (ಇಂದು) ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ನಲ್ಲಿ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ.ಅಧ್ಯಕ್ಷತೆಯನ್ನು ಅಮೃತ ಯುವ ಮೊಗೇರ ಸೇವಾ ಸಮಾಜದ ಪಿ.ಎಂ. ರಘು ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮೊಗೇರ ಸೇವಾ ಸಮಾಜದ ಜಿಲ್ಲಾಧ್ಯಕ್ಷ ಬಿ. ಶಿವಪ್ಪ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಮಾಜಿ ಉಪಾಧ್ಯಕ್ಷೆ ನೀಲಾ ಶೇಷಮ್ಮ, ಐ.ಎನ್.ಟಿ.ಯು.ಸಿ. ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ಮೊಗೇರ ಸೇವಾ ಸಮಾಜದ ಗೌರವ ಅಧ್ಯಕ್ಷ ಪಿ.ಎಂ. ರವಿ, ಸಮಾಜದ ಸ್ಥಾಪಕ ಅಧ್ಯಕ್ಷ ಸದಾನಂದ ಮಾಸ್ಟರ್, ಮಾಜಿ ಅಧ್ಯಕ್ಷೆ ಅಕ್ಕಮ್ಮ ಮೂರ್ತಿ ಹಾಗೂ ಸಮಾಜ ಸೇವಕ ಗೌತಮ್ ಶಿವಪ್ಪ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಸಮಾರೋಪ ಸಮಾರಂಭ
ಸಮಾರೋಪ ಸಮಾರಂಭ ತಾ. 21 ರಂದು ಸಂಜೆ 6 ಗಂಟೆಗೆ ನಡೆಯಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಪಿ.ಎಂ. ರಘು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕರಾದ ಕೆ.ಜಿ. ಬೋಪಯ್ಯ, ಎಂ.ಪಿ. ಅಪ್ಪಚ್ಚು ರಂಜನ್, ಜಿ.ಪಂ. ಸದಸ್ಯ ವಿಜು ಸುಬ್ರಹ್ಮಣಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.