ಮಡಿಕೇರಿ, ಮೇ 19: ಪ್ರಸಕ್ತ (2017-18) ನೇ ಸಾಲಿನ ಆಯವ್ಯಯ ಭಾಷಣದಲ್ಲಿ 249 ನೇ ಕಂಡಿಕೆಯ ಉಪ ಕಂಡಿಕೆ (1) ರಲ್ಲಿ ಮುಖ್ಯಮಂತ್ರಿಗಳ ಕೌಶಲ್ಯಾಭಿವೃದ್ಧಿ ಕರ್ನಾಟಕ ಕಾರ್ಯಕ್ರಮದಲ್ಲಿ ಬೇಡಿಕೆ ಸಮೀಕ್ಷೆಯನ್ನು ಆಧರಿಸಿ ಪ್ರಸ್ತುತ ಜಾರಿಯಲ್ಲಿರುವ ವಿವಿಧ ಯೋಜನೆಗಳಡಿಯಲ್ಲಿ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮದ ಮೂಲಕ 5 ಲಕ್ಷ ಯುವ ಜನತೆಗೆ ತರಬೇತಿ ನೀಡಲಾಗುವುದು ಎಂದು ಘೋಷಿಸಲಾಗಿದೆ. ಪ್ರಥಮ ಹಂತವಾಗಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಕೌಶಲ್ಯ ತರಬೇತಿ ಆಕಾಂಕ್ಷಿತ ಯುವ ಜನರ ಬೇಡಿಕೆ ಸಮೀಕ್ಷೆ ಮತ್ತು ನೋಂದಣಿ ಕಾರ್ಯಕ್ಕಾಗಿ ವೆಬ್ ಪೋರ್ಟಲ್ನ್ನು ವಿನ್ಯಾಸಗೊಳಿಸಿ ತಾ. 15 ರಂದು ಜಿಲ್ಲಾ ಉಸ್ತುವಾರಿ ಸಚಿವರಿಂದ ವೆಬ್ಪೋರ್ಟಲ್ ತಿತಿತಿ. ಞಚಿushಚಿಟಞಚಿಡಿ.ಛಿomಗೆ ಚಾಲನೆಯನ್ನು ನೀಡಲಾಗಿರುತ್ತದೆ. ಈ ಸಂಬಂಧವಾಗಿ ತಾ. 15 ರಿಂದ ಜಿಲೆಯ ತಾಲೂಕು ಕಚೇರಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ 7 ದಿನಗಳ ಕಾಲ ಕೌಶಲ್ಯಾಭಿವೃದ್ಧಿ ನೋಂದಣಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿರುತ್ತದೆ. ಸರ್ಕಾರದ ಮಹತ್ವಾಕಾಂಕ್ಷೆಯ ಈ ಯೋಜನೆಯಡಿ ಹಮ್ಮಿಕೊಳ್ಳಲಾದ ಬೇಡಿಕೆ ಸಮೀಕ್ಷೆ ಮತ್ತು ನೋಂದಣಿಕರಣ ಕಾರ್ಯ ಬೃಹತ್ ಪ್ರಮಾಣದಲ್ಲಿ ಜರುಗಲಿರುವದರಿಂದ ಕೌಶಲ್ಯ ತರಬೇತಿ ಆಕಾಂಕ್ಷಿತ ನಿರುದ್ಯೋಗಿ ಯುವಜನರಿಗೆ ನೋಂದಣಿಯನ್ನು ಮಾಡಿಕೊಳ್ಳಲು ಎಲ್ಲಾ ಇಲಾಖೆಗಳ ಸಹಕಾರದ ಅವಶ್ಯಕತೆ ಇದೆ. ಆದ್ದರಿಂದ ಎಲ್ಲಾ ಇಲಾಖಾಧಿಕಾರಿಗಳು ಕೌಶಲ್ಯ ತರಬೇತಿ ಆಕಾಂಕ್ಷಿಗಳು ನೋಂದಣಿ ಯನ್ನು ಮಾಡಲು ಸಾಧ್ಯವಾಗುವಂತೆ ಕ್ರಮವಹಿಸಲು ಜಿಲ್ಲಾಧಿಕಾರಿ ತಿಳಿಸಿದ್ದಾರೆ.