ಮಡಿಕೇರಿ, ಮೇ 19 : ಕಾಂಗ್ರೆಸ್ ಪಕ್ಷದಲ್ಲಿ ಪ್ರಾಮಾಣಿಕವಾಗಿ ಪಕ್ಷ ನಿಷ್ಠೆ ತೋರಿದವರಿಗೆ ಸೂಕ್ತ ಸ್ಥಾನ ಮಾನ ಮತ್ತು ಅಧಿಕಾರ ಸಿಗಲಿದ್ದು, ಪಕ್ಷದ ಮಹಿಳಾ ಘಟಕ ಮುಂಬರುವ ವಿಧಾನಸಭಾ ಚುನಾವಣೆಗೆ ಈಗಿನಿಂದಲೆ ಸಿದ್ಧತೆ ಮಾಡಿಕೊಳ್ಳಬೇಕೆಂದು ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಕರೆ ನೀಡಿದ್ದಾರೆ.ನಗರದ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್‍ನ ಪದಾಧಿಕಾರಿಗಳ ಸಭೆÉಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನಾನು ಮಹಿಳಾ ಕಾಂಗ್ರೆಸ್ ಘÀಟಕದ ವಿವಿಧ ಹುದ್ದೆಗಳಲ್ಲಿ ಅನೇಕ ವರ್ಷಗಳಿಂದ ಕಾರ್ಯ ನಿರ್ವಹಿಸಿ ಪಕ್ಷ ನಿಷ್ಠೆ ತೋರಿದ ಕಾರಣಕ್ಕಾಗಿ ಇಂದು ವಿಧಾನ ಪರಿಷತ್ ಸದಸ್ಯ ಸ್ಥಾನದಲ್ಲಿರುವದಾಗಿ ತಿಳಿಸಿದರು.
ಪ್ರತಿಯೊಬ್ಬ ಮಹಿಳಾ ಕಾರ್ಯಕರ್ತರು ಪಕ್ಷದ ಬೆಳವಣಿಗೆಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಮತ್ತು ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳ ಗೆಲುವಿಗಾಗಿ ಮಹಿಳಾ ಮತದಾರರ ಮನವೊಲಿಸುವ ಕಾರ್ಯ ಮಾಡಬೆÉೀಕೆಂದು ವೀಣಾ ಅಚ್ಚಯ್ಯ ಕರೆ ನೀಡಿದರು.
ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಪದ್ಮಿನಿ ಪೆÀÇನ್ನಪ್ಪ ಮಾತನಾಡಿ, 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಎರಡೂ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರಮುಖ ರೂವಾರಿಗಳಾಗಬೇಕೆಂದು ಸಲಹೆ ನೀಡಿದರು.
ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯಾಧ್ಯಕ್ಷೆÀ ಭಾರತಿ ಶೆಟ್ಟಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಡಿರುವ ಟೀಕೆಗಳನ್ನು ಖಂಡಿಸಿದ ಪದ್ಮಿನಿ ಪೆÀÇನ್ನಪ್ಪ, ಕಾಂಗ್ರೆಸ್ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲವೆಂದರು.
(ಮೊದಲ ಪುಟದಿಂದ) ಕಳೆÉದ ನಾಲ್ಕು ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಬಿಜೆಪಿಗೆ ನಲ್ವತ್ತು ವರ್ಷಗಳು ಕಳೆದರೂ ಮಾಡಲು ಸಾಧ್ಯವಿಲ್ಲವೆಂದು ಅಭಿಪ್ರಾಯಪಟ್ಟರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜಿ.ಆರ್. ಪುಷ್ಪಲತಾ, ಪ್ರತಿ ಬೂತ್ ಮಟ್ಟದಲ್ಲಿ ಸಮಿತಿ ರಚನೆ ಮತ್ತು ಮಹಿಳಾ ಕಾಂಗ್ರೆಸ್‍ನ ಬೃಹತ್ ಸಮಾವೇಶ ನಡೆಸಲಾಗುವದೆಂದು ತಿಳಿಸಿದರು. ಜಿಲ್ಲೆಯಲ್ಲಿರುವ ಮತದಾರರಲ್ಲಿ ಶೇ.50 ರಷ್ಟು ಮಹಿಳೆಯರೆ ಇದ್ದು, ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಹಿಳೆಯರಿಗೆ ಮನವರಿಕೆ ಮಾಡಿಕೊಡಲು ಕಾರ್ಯಕರ್ತರು ಮುಂದಾಗಬೇಕೆಂದರು.
ಸಭೆಯಲ್ಲಿ ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಸುನೀತ, ಲೀಲಾವತಿ, ಶ್ರೀಜ, ನಗರಸಭಾ ಸದಸ್ಯೆ ಜುಲೇಕಾಬಿ, ತಾಲೂಕು ಪಂಚಾಯಿತಿ ಸದಸ್ಯರಾದ ಆಶಾ ಜೇಮ್ಸ್, ಸುಹಾದಾ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ವತ್ಸಲಾ ಶ್ರೀಧರ್, ಸದಸ್ಯರಾದ ಅಮೀನ, ಮಂಜುಳಾ, ಮಂಜುಳಾ ಹರೀಶ್, ಮುಕ್ಕಾಟಿರ ಕಾವೇರಮ್ಮ, ಕಡೇಮಾಡ ಕುಸುಮ, ರಾಜೇಶ್ವರಿ, ಶೈಲಾ ಕುಟ್ಟಪ್ಪ, ಜಿ.ಪಂ. ಮಾಜಿ ಸದಸ್ಯ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ, ಪ್ರಮುಖರಾದ ಪೂವಮ್ಮ , ಪುಟ್ಟ ಲಕ್ಷ್ಮಿ, ಸ್ವರ್ಣಲತ, ರಾಧಾ ಪುಟ್ಟರಾಜು ಸೇರಿದಂತೆ ಮಹಿಳಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಆಶಾ ಜೇಮ್ಸ್ ಸ್ವಾಗತಿಸಿ, ಅಮೀನ ವಂದಿಸಿದರು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕÀ ತೆನ್ನಿರ ಮೈನ ಕಾರ್ಯಕ್ರಮ ನಿರೂಪಿಸಿದರು.