ಸುಂಟಿಕೊಪ್ಪ, ಮೇ 20: ಕೊಡಗು ಜಿಲ್ಲಾ ಕಾರ್ಮಿಕರ ಮತ್ತು ಚಾಲಕರ ಸಂಘದ 5ನೇ ವಾರ್ಷಿಕೋತ್ಸವ ಹಾಗೂ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಸಾಮೂಹಿಕ ವಿವಾಹ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಸಮಾರಂಭವನ್ನು ತಾ. 21 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ಸುಂಟಿಕೊಪ್ಪದ ಶ್ರೀ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆಸಲಾಗುವದೆಂದು ಸಂಘದ ಅಧ್ಯಕ್ಷ ಕೆ.ಹೆಚ್. ಶರೀಫ್ ತಿಳಿಸಿದ್ದಾರೆ.
ಬೆಳಿಗ್ಗೆ 8.30 ಗಂಟೆಗೆ ಸುಂಟಿಕೊಪ್ಪ ಅಯ್ಯಪ್ಪ ದೇವಾಲಯದಿಂದ ಚಾಲಕರು ಹಾಗೂ ಕಾರ್ಮಿಕರು ಮೆರವಣಿಗೆ ಮೂಲಕ ಮೀನಾಕ್ಷಮ್ಮ ಕಲ್ಯಾಣ ಮಂಟಪಕ್ಕೆ ತೆರಳಲಿದ್ದಾರೆ. ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ನೆರವೇರಿಸÀಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಹಾಸನ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷ ಎ. ಲೋಕೇಶ್ ಕುಮಾರ್, ಮಾಜಿ ಸಚಿವ ಹೆಚ್. ವಿಶ್ವನಾಥ್, ಮಾಜಿ ಶಾಸಕ ಕೆ.ಎಂ. ಇಬ್ರಾಹಿಂ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್ ಕರ್ನಾಟಕ ರಾಜ್ಯ ರೇಷ್ಮೆ ಮಹಾ ಮಂಡಳಿ ಅಧ್ಯಕ್ಷ ಟಿ.ಪಿ. ರಮೇಶ್, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿ.ಪಂ. ಸದಸ್ಯರುಗಳಾದ ಕೆ.ಪಿ. ಚಂದ್ರಕಲಾ, ಕುಮುದಾ ಧರ್ಮಪ್ಪ, ಪಿ.ಎಂ. ಲತೀಫ್, ತಾ.ಪಂ. ಸದಸ್ಯೆ ಒಡಿಯಪ್ಪನ ವಿಮಾಲಾವತಿ, ಗ್ರಾ.ಪಂ. ಅಧ್ಯಕ್ಷರುಗಳಾದ ರೋಸ್‍ಮೇರಿ ರಾಡ್ರಿಗಸ್, ಅಬ್ಬಾಸ್, ವಿ.ಎನ್. ಸುಜಾತ ಹಾಗೂ ಇನ್ನಿತರರು ಆಗಮಿಸಲಿದ್ದಾರೆ.
ಹಿರಿಯ ವಾಹನ ಮೋಟಾರು ನಿರೀಕ್ಷಕರು ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ ಸಾಧಿಕ್ ಶರೀಫ್ ಮತ್ತು ಮಡಿಕೇರಿ ಸಾರಿಗೆ ಇಲಾಖೆ ಮೋಟಾರು ನಿರೀಕ್ಷಕರು ಸಿ.ಪಿ. ಅನಿಲ್ ವಾಹನ ಚಾಲನೆ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.