ಮಡಿಕೇರಿ, ಮೇ 20: ವೀರಾಜಪೇಟೆ ತಾಲೂಕಿನಲ್ಲಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಹಾಗೂ ಗಿರಿಜನ ಆಶ್ರಮ ಶಾಲೆಗಳಿಗೆ 2017-18ನೇ ಸಾಲಿಗೆ ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಗಿರಿಜನ ಆಶ್ರಮ ಶಾಲೆಗಳಿಗೆ 1 ನೇ ತರಗತಿಯಿಂದ 7ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ವಿದ್ಯಾರ್ಥಿ ನಿಲಯಗಳು ಹಾಗೂ ಆಶ್ರಮ ಶಾಲೆಗಳಲ್ಲಿ ಉಚಿತ ವಸತಿ, ಊಟ, ತಿಂಡಿ, ಪುಸ್ತಕ, ಸಮವಸ್ತ್ರ ಹಾಗೂ ಇತರ ನಿಲಯಗಳಲ್ಲಿ ಲಭ್ಯವಾಗುವ ಮೂಲಭೂತ ಸೌಲಭ್ಯಗಳು ಸಂಪೂರ್ಣ ಉಚಿತವಾಗಿರುತ್ತದೆ. ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಸಹ ಅನುಪಾತವಾರು ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ.
ನಿಲಯ/ಆಶ್ರಮ ಶಾಲೆಗಳ ವಿವರಗಳು: ತಿತಿಮತಿ, ಕುಟ್ಟ ಸರ್ಕಾರಿ ಗಿರಿಜನ ಬಾಲಕರ ನಿಲಯಗಳು, ಕಾರ್ಮಾಡು, ತಿತಿಮತಿ, ಕುಟ್ಟ ಸರ್ಕಾರಿ ಗಿರಿಜನ ಬಾಲಕಿಯರ ನಿಲಯಗಳು, ಚೆನ್ನಂಗಿ ಬಸವನಹಳ್ಳಿ, ಮರೂರು, ತಿತಿಮತಿ, ನಿಟ್ಟೂರು ಜಾಗಲೆ, ನಾಗರಹೊಳೆ, ಕೋತೂರು, ಗೋಣಿಗದ್ದೆ ಸರ್ಕಾರಿ ಗಿರಿಜನ ಆಶ್ರಮ ಶಾಲೆಗಳು.
ಅರ್ಜಿಗಳನ್ನು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ ಇಲ್ಲಿಂದ ಅಥವಾ ಸಂಬಂಧಿಸಿದ ನಿಲಯ/ಆಶ್ರಮ ಶಾಲೆಗಳ ವಾರ್ಡನ್, ಮುಖ್ಯ ಶಿಕ್ಷಕರಿಂದ ಅರ್ಜಿಗಳನ್ನು ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸಂಬಂಧಿಸಿದ ವಿದ್ಯಾರ್ಥಿ ನಿಲಯಗಳ ವಾರ್ಡನ್ ಹಾಗೂ ಆಶ್ರಮ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಜೂನ್ 10 ರೊಳಗೆ ಸಲ್ಲಿಸುವಂತೆ ವೀರಾಜಪೇಟೆ ತಾಲೂಕು ಪೊನ್ನಂಪೇಟೆಯ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಅರಿವು ಶೈಕ್ಷಣಿಕ ಸಾಲ ಯೋಜನೆ
ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಿ.ಇ.ಟಿ. ಮೂಲಕ ಸೀಟು ಪಡೆದು ಬಿ.ಇ., ಎಂ.ಬಿ.ಬಿ.ಎಸ್., ಬಿ.ಯು.ಎಂ.ಎಸ್., ಬಿ.ಡಿ.ಎಸ್., ಬಿ.ಎ.ಎಂ.ಎಸ್., ಬಿ.ಎಚ್.ಎಂ.ಎಸ್, ಎಂ.ಸಿ.ಎ., ಎಂ.ಎಸ್ಸಿ(ಅಗ್ರಿ), ಮುಂತಾದ ವೃತ್ತಿಪರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ. 2 ರ ಬಡ್ಡಿ ದರದಲ್ಲಿ ವಾರ್ಷಿಕ ಗರಿಷ್ಠ ರೂ. 1 ಲಕ್ಷಗಳವರೆಗೆ ಸಾಲ ಮಂಜೂರು ಮಾಡಲಾಗುತ್ತದೆ.
2017-18ನೇ ಸಾಲಿಗೆ ಸಾಲ ಪಡೆಯ ಬಯಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸಿ.ಇ.ಟಿ.ಗೆ ಪಾವತಿಸಬೇಕಾದ ಶುಲ್ಕವನ್ನು ಸಿ.ಇ.ಟಿ.ಯಿಂದ ಸೀಟು ಪಡೆಯುವ ಹಂತದಲ್ಲಿಯೇ ನಿಗಮದಿಂದ ಸಾಲ ಮಂಜೂರು ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಪಾವತಿಸಿದ ಮುಂಗಡ ಹಣದ ಮೊತ್ತದಲ್ಲಿ ಜಮಾ ಮಾಡಲಾಗುತ್ತದೆ.
2017-18ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಸೀಟು ಪಡೆದು ವೃತ್ತಿಪರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡಲು ನಿಗಮದಿಂದ ಸಾಲ ಪಡೆಯ ಬಯಸುವ ಹಿಂದುಳಿದ ವರ್ಗಗಳ ಪ್ರ-1, ಪ್ರ-2ಎ(ವಿಶ್ವಕರ್ಮ ಮತ್ತು ಉಪ ಜಾತಿಗಳನ್ನು ಹಾಗೂ ಅಲ್ಪಸಂಖ್ಯಾತರನ್ನು ಹೊರತುಪಡಿಸಿ), ಪ್ರ-3ಎ ಮತ್ತು ಪ್ರ-3ಬಿ ಗೆ ಸೇರಿದ್ದು, ವಿದ್ಯಾರ್ಥಿ ಮತ್ತು ಕುಟುಂಬದ ವಾರ್ಷಿಕ ವರಮಾನ ರೂ. 3.50 ಲಕ್ಷಗಳ ಮಿತಿಯಲ್ಲಿರುವ ವಿದ್ಯಾರ್ಥಿಗಳಿಂದ ಅರ್ಜಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸಾಲ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವೆಬ್ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಜbಛಿಜಛಿ ರಲ್ಲಿ ಲಾಗಿನ್ ಆಗಿ ವೆಬ್ಸೈಟ್ನಲ್ಲಿ ಲಭ್ಯವಿರುವ ಯೂಸರ್ Useಡಿಟಿಚಿme-iಟಿಜಿಡಿಚಿ\ಜbvಜಛಿಚಿಡಿivu ಮತ್ತು Pಚಿssತಿಚಿಡಿಜ-ಆಃ (ಜ#098 ನ್ನು ನಮೂದಿಸಿ ಅರ್ಜಿಯನ್ನು ಆನ್ಲೈನ್ನಲ್ಲಿ ಭರ್ತಿ ಮಾಡುವದು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರ, ಆಧಾರ್ ಕಾರ್ಡ್ ಸಂಖ್ಯೆ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಮತ್ತು ಸಿ.ಇ.ಟಿ. ಪ್ರವೇಶ ಪರೀಕ್ಷೆ ಅಡ್ಮಿಷನ್ ಟಿಕೆಟ್ ಈ ದಾಖಲೆಗಳನ್ನು ಅರ್ಜಿಯೊಂದಿಗೆ ಆನ್ಲೈನ್ನಲ್ಲಿ ತಾ. 20 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಕಚೇರಿ ವೇಳೆಯಲ್ಲಿ ದೂ.ಸಂ:08272-221656 ನ್ನು ಸಂಪರ್ಕಿಸಬಹುದು ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಬೀದಿನಾಟಕ ಅರ್ಹ ತಂಡಗಳಿಂದ
ಸರ್ಕಾರದ ವಿವಿಧ ಯೋಜನೆಗಳ ಕುರಿತು ಬೀದಿನಾಟಕ ಮೂಲಕ ಪ್ರಚಾರ ಮಾಡಲು ಬೀದಿನಾಟಕ ಅರ್ಹ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಬೀದಿನಾಟಕ ತಂಡವು ಪ್ರದರ್ಶನದಲ್ಲಿ ಅನುಭವ ಹೊಂದಿರಬೇಕು. ತಂಡವು ಸರ್ಕಾರದ ನಿಯಮದಂತೆ ನೋಂದಣಿಯಾಗಿರಬೇಕು. ಒಂದು ತಂಡದಲ್ಲಿ ಇಬ್ಬರು ಮಹಿಳಾ ಕಲಾವಿದರು, 8 ಮಂದಿ ಪುರುಷ ಕಲಾವಿದರು ಹೊಂದಿರಬೇಕು. ಬೀದಿನಾಟಕ ತಂಡದ ಎಲ್ಲಾ ಕಲಾವಿದರ ಬ್ಯಾಂಕ್ ಖಾತೆ, ಪಾನ್ ಕಾರ್ಡ್, ಆಧಾರ್ ಕಾರ್ಡ್ ಹೊಂದಿರಬೇಕು. ಕಲಾ ತಂಡ ಮತ್ತು ಕಲಾವಿದರು ಜಿಲ್ಲೆಯವರಾಗಿರಬೇಕು.
ತಂಡ ಆಯ್ಕೆ ಸಂದರ್ಭದಲ್ಲಿ ತಂಡದ ಮುಖ್ಯಸ್ಥರು ಸೇರಿದಂತೆ, ಕಲಾವಿದರು ಕಡ್ಡಾಯವಾಗಿ ಹಾಜರಾಗಬೇಕು. ತಜ್ಞರ ಸಮಿತಿ ಮೂಲಕ ಬೀದಿನಾಟಕ ಕಲಾತಂಡವನ್ನು ಆಯ್ಕೆ ಮಾಡಲಾಗುವದು. ಕಲಾವಿದರ ಬ್ಯಾಂಕ್ ಖಾತೆ, ಆಧಾರ್ ಕಾರ್ಡ್, ಪಾನ್ ಕಾರ್ಡ್ನ ಪ್ರತಿ ಹಾಗೂ ಕಲಾವಿದರ ವಿಳಾಸ, ಮೊಬೈಲ್ ಸಂಖ್ಯೆ ಮತ್ತಿತರ ಮಾಹಿತಿಯನ್ನು ಭಾವಚಿತ್ರ ಸಹಿತ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ತಾ. 22 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ ದೂರವಾಣಿ ಸಂಖ್ಯೆ: 08272-228449 ನ್ನು ಸಂಪರ್ಕಿಸಬಹುದು.
ಲೋಕಾಯುಕ್ತ; ದೂರು
ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. 24 ರಂದು ಸೋಮವಾರಪೇಟೆಯ ಲೋಕೋಪಯೋಗಿ ಇಲಾಖೆ ನಿರೀಕ್ಷಣಾ ಮಂದಿರದಲ್ಲಿ, ತಾ. 25 ರಂದು ವೀರಾಜಪೇಟೆಯ ಲೋಕೋಪಯೋಗಿ ಇಲಾಖೆ ನಿರೀಕ್ಷಣಾ ಮಂದಿರದಲ್ಲಿ ಹಾಗೂ ತಾ. 26 ರಂದು ಮಡಿಕೇರಿಯ ಲೋಕೋಪಯೊಗಿ ಇಲಾಖೆಯ ನಿರೀಕ್ಷಣಾ ಮಂದಿರ(ಮೂರ್ನಾಡು ರಸ್ತೆ)ದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಗಳನ್ನು ನೀಡಿ, ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ಮಡಿಕೇರಿ(08272-220797) ಇಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಮೋಹಿತ್ ಸಹದೇವ ತಿಳಿಸಿದ್ದಾರೆ.