ಸುಂಟಿಕೊಪ್ಪ, ಮೇ 21: ಆಡಂಬರದ ಮದುವೆಯನ್ನು ಮಾಡಿ ಹಣ ವ್ಯಯಿಸುವ ಬದಲು ಸರಳ ವಿವಾಹವಾಗಿ ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ಕೊಡಿಸುವುದನ್ನು ರೂಢಿಸಿಕೊಂಡರೆ ಸಮಾಜದ ಅಭಿವೃದ್ಧಿಯಾಗಲಿದೆ ಎಂದು ಶಾಸಕ ಎಂ.ಪಿ.ಅಪ್ಪಚ್ಚು ಕಿವಿ ಮಾತು ಹೇಳಿದರು.ಕೊಡಗು ಜಿಲ್ಲಾ ಕಾರ್ಮಿಕರ ಮತ್ತು ಚಾಲಕರ ಸಂಘದ 5ನೇ ವಾರ್ಷಿಕೋತ್ಸವ ಹಾಗೂ ಕಾರ್ಮಿಕರ ದಿನಾಚರಣೆ ಅಂಗವಾಗಿ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಜರುಗಿದ ಉಚಿತ ವಿವಾಹ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಪೋಷಕರು ಕಷ್ಟಪಟ್ಟು ಮಕ್ಕಳಿಗೆ ವಿದ್ಯೆ ಕೊಡಿಸಿದರೆ ಅದೇ ದೊಡ್ಡ ಆಸ್ತಿಯಾಗಲಿದೆ. ಈ ನಿಟ್ಟಿನಲ್ಲಿ ಪೋಷಕರು ಚಿಂತಿಸಬೇಕು ಎಂದು ಹೇಳಿದರು.

ಜಿಲ್ಲಾ ಎಸ್‍ಡಿಪಿಐ ಅಧ್ಯಕ್ಷ ಹಾಗೂ ಮಡಿಕೇರಿ ನಗರಸಭಾ ಸದಸ್ಯ ಅಮೀನ್‍ಮೊೈಸಿನ್ ಮಾತನಾಡಿ ಶ್ರಮಜೀವಿಗಳಾದ ಕಾರ್ಮಿಕರ ಬದುಕು ಇಂದು ಅತಂತ್ರವಿದ್ದು, ಹೋರಾಟದ ಮೂಲಕವೇ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದುಡಿಯುವ ವರ್ಗ ನ್ಯಾಯವನ್ನು ಕಂಡುಕೊಳ್ಳುವಂತಾಗಿದೆ. ಸಮಾಜದಲ್ಲಿ ಕೆಳವರ್ಗದವರು ಅಧÀಃಪತನ ಹಾದಿಯಲ್ಲಿದ್ದಾರೆ ಎಂದು ವಿಷಾದಿಸಿದರು.

ಹಾಸನ ಗ್ರಾಹಕರ ವೇದಿಕೆಯ ಅಧ್ಯಕ್ಷ ಸ್ಥಳೀಯರಾದ ಎ.ಲೋಕೇಶ್ ಕುಮಾರ್ ಅವರಿಗೆ ವಾಹನ ಚಾಲಕರ ಮತ್ತು ಕಾರ್ಮಿಕರ ಸಂಘದ ವತಿಯಿಂದ ಈ ಸಂದರ್ಭ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಎ.ಲೋಕೇಶ್‍ಕುಮಾರ್ ಸರಕಾರ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ, ಆದರೆ ಅದು ಬಡವರು ಕೂಲಿ ಕಾರ್ಮಿಕರಿಗೆ ತಲಪಲು ಅಡ್ಡಿ ಆತಂಕ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಕಾರ್ಮಿಕರ ಮತ್ತು ಚಾಲಕರ ಸಂಘ ಉತ್ತಮ ಕೆಲಸ ಮಾಡುತ್ತಿದ್ದು ಈ ಸಂಘದ ಅಭಿವೃದ್ಧಿ ಕಾರ್ಯಗಳಿಗೆ ಸಂಪೂರ್ಣ ಸಹಕಾರ ನೀಡುವದಾಗಿ ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ.ಭಾರತೀಶ್ ಕೇಂದ್ರ ಹಾಗೂ ರಾಜ್ಯ ಸರಕಾರ ಜನಸ್ನೇಹಿ ಕಾಂiÀರ್iಕ್ರಮಗಳನ್ನು ಹಮ್ಮಿಕೊಂಡಿದೆ ಅದರ ಸೌಲಭ್ಯ ಪಡೆದುಕೊಳ್ಳಲು ಫಲಾನುಭವಿಗಳು ಹರಸಾಹಸ ಪಡುತ್ತಿದ್ದಾರೆ. ಕಾರ್ಮಿಕ ಮತ್ತು ಚಾಲಕರ ಸಂಘ ಸಾಮಾಜಿಕ ಬದ್ಧತೆಯಿಂದ ಸೇವೆ ಸಲ್ಲಿಸುತ್ತಿದ್ದು ಕಾರ್ಮಿಕರಿಗೆ ಸರಕಾರದ ಆನೇಕ ಸೌಲಭ್ಯ ದೊರಕಿಸಿಕೊಡಲು ಪ್ರಯತ್ನಿಸಿದ್ದು ಶ್ಲಾಘನೀಯವಾದುದು ಎಂದರು.

ಕೊಡಗು ಜಿಲ್ಲಾ ಗ್ರಾಮ ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷ ಪಿ.ಆರ್.ಭರತ್ ಸಮಾಜದ ಮುಖ್ಯ ವಾಹಿನಿಯಲ್ಲಿ ದುಡಿಯುವ ವರ್ಗದ ಶ್ರಮ ಅತಿ ಅಮೂಲ್ಯವಾದುದು ಎಂದರು.

ಸುಂಟಿಕೊಪ್ಪ ಶ್ರೀ ಕೋದಂಡರಾಮ ಮಂದಿರದಲ್ಲಿ ಹಿಂದೂ ಸಂಪ್ರಾದಾಯದಂತೆ ಒಂದು ಜೋಡಿಗೆ ವಿವಾಹ ನಡೆಸಲಾಯಿತು.

ಅತಿಥಿಗಳಾಗಿದ್ದ ಜಿ.ಪಂ.ಉಪಾಧ್ಯಕ್ಷೆ ಲೋಕೇಶÀ್ವರಿ ಗೋಪಾಲ್, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಹರೀಶ್ ಬೋಪಣ್ಣ, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ವಿ.ಪಿ.ಶಶಿಧರ್ ನೋಟರಿ ಕುಂಞ ಅಬ್ಧುಲ್ಲಾ, ಸುಂಟಿಕೊಪ್ಪ ಗ್ರಾ.ಪಂ. ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್, ಉಪಾಧ್ಯಕ್ಷ ಪಿ.ಆರ್.ಸುಕುಮಾರ್, ಜಿಲ್ಲಾ ಕಾರ್ಮಿಕ ಮತ್ತು ವಾಹನ ಚಾಲಕರ ಸಂಘದ ಅಧ್ಯಕ್ಷ ಅಣ್ಣಾ ಶರೀಫ್, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಡಿ.ನರಸಿಂಹ, ನಗರ ಬಿಜೆಪಿ ಅಧ್ಯಕ್ಷ ಪಿ.ಆರ್.ಸುನೀಲ್ ಕುಮಾರ್, ತುಳು ಜಾನಪದ ಕೂಟ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಕೆ.ಪಿ.ದಿನೇಶ್, ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ರವೀಂದ್ರ ಇವರ ಸಮ್ಮುಖದಲ್ಲಿ ವಧು ವರರನ್ನು ಸಾರ್ವಜನಿಕರು, ಗಣ್ಯರು ಆಶೀರ್ವದಿಸಿದರು.

ಕಾರ್ಮಿಕ ಮತ್ತು ವಾಹನ ಚಾಲಕರ ಸಂಘದ ಸದಸ್ಯರ ಬಡಮಕ್ಕಳಿಗೆ ನೋಟ್ ಪುಸ್ತಕವನ್ನು ವಿತರಿಸಲಾಯಿತು.

ಸಮಾರಂಭದ ವೇದಿಕೆಯಲ್ಲಿ ಜಿ.ಪಂ.ಸದಸ್ಯ ಪಿ.ಎಂ.ಲತೀಫ್, ಐಎನ್‍ಟಿಸಿಯು ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ಕೊಡಗು ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಯಾಕೂಬ್, ಕೊಡಗರಹಳ್ಳಿ ಗ್ರಾ.ಪಂ.ಅಧ್ಯಕ್ಷ ಅಬ್ಬಾಸ್, ಗ್ರಾ.ಪಂ. ಮಾಜಿ ಅಧ್ಯಕ್ಷ ಪಿ.ಎಫ್.ಸಬಾಸ್ಟೀನ್, ಬಿ.ಕೆ.ಮೋಹನ್, ಯುವ ಜೆಡಿಎಸ್ ಜಿಲಾಧ್ಯಕ್ಷ ಇಸಾಕ್ ಖಾನ್, ಹಿಂದಿನ ಠಾಣಾಧಿಕಾರಿ ಅನೂಪ್ ಮಾದಪ್ಪ ವೇದಿಕೆಯಲ್ಲಿ ಉಸ್ಥಿತರಿದ್ದರು.

ಸುಂಟಿಕೊಪ್ಪ ಹಿಂದಿನ ಪೊಲೀಸ್ ಠಾಣಾಧಿಕಾರಿಯಾದ ಅನೂಪ್ ಮಾದಪ್ಪ, ಸಂತಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 597 ಅಂಕ ಪಡೆಯುವ ಮೂಲಕ (ಶೇ95.52) ಸಾಧನೆ ಮಾಡಿರುವ ಪಿ.ಎಸ್. ಅನ್‍ಲೀಶ ಅವರುಗಳನ್ನು ಈ ಸಂದರ್ಭ ಗೌರವಿಸಲಾಯಿತು.

ಸಮಾರಂಭಕ್ಕೂ ಮೊದಲು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಿಂದ ಕುಂಭ ಕಳಶ ಹೊತ್ತ ಮಹಿಳೆಯರು ಮತ್ತು ಚಾಲಕರು ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.