ಮಡಿಕೇರಿ, ಮೇ 20: 2017-18ನೇ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ತಾ. 31 ರ ಸಂಜೆ 5.30 ಗಂಟೆ ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವವರು 5ನೇ ತರಗತಿಯಲ್ಲಿ ಶೇ. 60 ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಆಯ್ಕೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಾದ ಶ್ರೀ ಸಾಯಿ ಶಂಕರ್ ಎಜುಕೇಷನಲ್ ಇನ್ಸ್‍ಟ್ಯೂಷನ್ಸ್, ಪ್ರಶಾಂತಿ ನಿಲಯ, ಪೊನ್ನಂಪೇಟೆ, ದಕ್ಷಿಣ ಕೊಡಗು ಮತ್ತು ಸೈಂಟ್ ಜೋಸೆಫ್ ಗಲ್ರ್ಸ್ ಕಾಂಪೋಸಿಟ್ ಹೈಸ್ಕೂಲ್, ಮಡಿಕೇರಿ ಇಲ್ಲಿ 6ನೇ ತರಗತಿಗೆ ಪ್ರವೇಶ ಅವಕಾಶವನ್ನು ಕಲ್ಪಿಸಲಾಗುವುದು. ವಿದ್ಯಾರ್ಥಿಗಳಿಂದ ಜಾತಿ ದೃಢೀಕರಣ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ ಹಾಗೂ ಮುಖ್ಯೋಪಾಧ್ಯಾಯರಿಂದ ದೃಢೀಕೃತಗೊಂಡ ಅಂಕ ಪಟ್ಟಿಯನ್ನು ಸಲ್ಲಿಸುವುದು. ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ ರೂ. 2 ಲಕ್ಷ ಒಳಗೆ ಇರಬೇಕು. (ಈ ಬಗ್ಗೆ ತಹಶೀಲ್ದಾರರವರಿಂದ ಪಡೆದ ಆದಾಯ ಪ್ರಮಾಣ ಪತ್ರ ಸಲ್ಲಿಸುವದು).

ಅರ್ಜಿಯನ್ನು ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ-08272-229983, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ-08274-249476, ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-08272-223552 ಹಾಗೂ ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-08276-281115 ಇಲ್ಲಿಂದ ಪಡೆಯಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ತಿಳಿಸಿದ್ದಾರೆ.

ಪ್ರಥಮ ಪಿಯುಸಿ ತರಗತಿಗೆ ಪ್ರವೇಶಕ್ಕಾಗಿ

ಸೋಮವಾರಪೇಟೆ ತಾಲೂಕು ಗರಗಂದೂರು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಕಾಲೇಜಿಗೆ ಪ್ರಥಮ ಪಿಯುಸಿ ತರಗತಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ಸರ್ಕಾರ ಸ್ಥಾಪಿಸಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6 ನೇ ತರಗತಿಯಿಂದ 10 ನೇ ತರಗತಿವರೆಗೆ ಕಿತ್ತೂರು ರಾಣಿ ಚೆನ್ನಮ್ಮ/ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ 6 ರಿಂದ 10 ನೇ ತರಗತಿವರೆಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಈ ವಿದ್ಯಾರ್ಥಿಗಳಿಗೆ ಮುಂದುವರಿದು ಶಿಕ್ಷಣ ನೀಡುವ ಹಿತದೃಷ್ಟಿಯಿಂದ ಸರ್ಕಾರ ಜಿಲ್ಲೆಗೊಂದರಂತೆ 30 ಮೊರಾರ್ಜಿ ದೇಸಾಯಿ/ ಏಕಲವ್ಯ ಪದವಿಪೂರ್ವ ವಸತಿ ಕಾಲೇಜುಗಳನ್ನು ನಿರ್ವಹಿಸಲಾಗುತ್ತಿದೆ.

ಪ್ರಥಮ ಪಿ.ಯು.ಸಿ. ಪ್ರವೇಶಕ್ಕಾಗಿ

2017-18ನೇ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಅರ್ಹ ವಿದ್ಯಾರ್ಥಿಗಳನ್ನು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳುಗೋಡು ಗ್ರಾಮದ ಏಕಲವ್ಯ ಮಾದರಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಪ್ರಥಮ ಪಿ.ಯು.ಸಿ. ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ತಾ. 31 ರ ಸಂಜೆ 5.30 ಕೊನೆಯ ದಿನವಾಗಿದೆ. ಪ್ರಥಮ ಪಿ.ಯು.ಸಿ. ತರಗತಿಯ ಪಿಸಿಎಂಬಿ. ಪಿಸಿಎಂಸಿ ಕಾಂಬಿನೇಷನ್‍ಗಳಿಗೆ ತಲಾ 30 ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲಾಗುವದು. ಎಸ್.ಎಸ್.ಎಲ್.ಸಿ.ಯಲ್ಲಿ ಗಣಿತ, ವಿಜ್ಞಾನ ಮತ್ತು ಇಂಗ್ಲೀಷ್ ವಿಷಯದಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಿ ಪ್ರವೇಶ ನೀಡಲಾಗುವದು. ಕೊಡಗು ಜಿಲ್ಲೆ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ. ಅರ್ಜಿ ಪಡೆಯಲು ಪ್ರಾಂಶುಪಾಲರ ಕಚೇರಿ, ಏಕಲವ್ಯ ಮಾದರಿ ವಸತಿ ಶಾಲೆ, ಬಾಳುಗೋಡು ವೀರಾಜಪೇಟೆ ತಾಲೂಕು ದೂರವಾಣಿ ಸಂಖ್ಯೆ: 9902499269 ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ತಿಳಿಸಿದ್ದಾರೆ.

9ನೇ ತರಗತಿಗೆ ಪ್ರವೇಶಾತಿಗಾಗಿ

ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯ ವತಿಯಿಂದ 2017-18ನೇ ಸಾಲಿಗೆ 9ನೇ ತರಗತಿಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

2016-17ನೇ ಸಾಲಿನಲ್ಲಿ 7ನೇ ತರಗತಿಯಲ್ಲಿ ಜಿಲ್ಲೆಯ ಸರ್ಕಾರಿ, ಅನುದಾನಿತ ಶಾಲೆಗಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಪ್ರಾಂಶುಪಾಲರು, ಜವಾಹರ ನವೋದಯ ವಿದ್ಯಾಲಯ, ಗಾಳಿಬೀಡು ಇಲ್ಲಿಂದ ಅಥವಾ ವೆಬ್‍ಸೈಟ್: ತಿತಿತಿ.ರಿಟಿvಞoಜಚಿgu.gov.iಟಿ ನಿಂದ ತಾ. 29 ರವರೆಗೆ ಪಡೆಯಬಹುದು. ಅರ್ಜಿ ಸಲ್ಲಿಸಲು ತಾ. 29 ಕೊನೆಯ ದಿನವಾಗಿದೆ. ಜೂನ್ 24 ರಂದು ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯ, ಮಡಿಕೇರಿ ಇಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.