ಮಡಿಕೇರಿ, ಮೇ 21: ಕಾಂಗ್ರೆಸ್ ಸರ್ಕಾರ ಕೊಡಗು ಜಿಲ್ಲೆಗೆ ಘೋಷಿಸಿರುವ ನಾಲ್ಕನೇ ಹಂತದ ವಿಶೇಷ ಪ್ಯಾಕೆÉೀಜ್‍ನ 50 ಕೋಟಿ ರೂ. ಬಿಡುಗಡೆಯಾಗಿದ್ದು, ರಸ್ತೆಗಳ ಕಾಮಗಾರಿಗೆ ಹಣವನ್ನು ವಿನಿಯೋಗಿಸಲು ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನದಲ್ಲಿ ಕ್ರಮ ಕೈಗೊಳ್ಳಲಾಗುವದು ಎಂದು ಜಿಲ್ಲಾ ಕಾಂಗ್ರೆಸ್ ಪ್ರಬಾರ ಅಧ್ಯಕ್ಷ ಟಿ.ಪಿ. ರಮೇಶ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಲ್ಕನೇ ಹಂತದ ವಿಶೇಷ ಪ್ಯಾಕೇಜ್‍ನ ಹಣ ಮುಂಬರುವ ವಿಧಾನ ಸಭಾ ಚುನಾವಣೆಗೂ ಮೊದಲೇ ವಿನಿಯೋಗವಾಗಲಿದೆ ಎಂದರು.

94 ‘ಸಿ’ ಯಡಿ ಸುಮಾರು 1200 ಫಲಾನುಭವಿಗಳಿಗೆ ನಿವೇಶನದ ಹಕ್ಕು ಪತ್ರ ನೀಡಲಾಗಿದ್ದು, ಇನ್ನೂ 2500 ಫಲಾನುಭವಿಗಳಿಗೆ ಹಕ್ಕುಪತ್ರ ನೀಡಬೇಕಾಗಿದೆ. ಮುಂದಿನ ವಾರ ಕೊಡಗು ಜಿಲ್ಲೆಗೆ ಕಂದಾಯ ಸಚಿವರು ಆಗಮಿಸಲಿದ್ದು, ನಿವೇಶನ ರಹಿತರಿಗೆ ಭೂಮಿ ಹಂಚಿಕೆ ಮಾಡಲು ಪರಿಶೀಲನೆÀಗೆ ಕ್ರಮ ಕೈಗೊಳ್ಳಲಾಗುವದು ಎಂದ ಅವರು, ಮಕ್ಕಂದೂರು ಗ್ರಾ.ಪಂ ವ್ಯಾಪ್ತಿಯ ರಾಟೆಮನೆ ಕಾಲೋನಿಯಲ್ಲಿ ಕಳೆದ ಹದಿನೇಳು ವರ್ಷಗಳಿಂದ ಹಕ್ಕುಪತ್ರ ಸಿಗದ ಫಲಾನುಭವಿಗಳಿದ್ದಾರೆ ಎನ್ನುವ ‘ಶಕ್ತಿ’ ವರದಿ ಪ್ರಸ್ತಾಪಿಸಿ ಸ್ಥಳೀಯ ವಿಧಾನ ಪರಿಷತ್ ಸದಸ್ಯರು ಹಾಗೂ ಶಾಸಕರೊಂದಿಗೆ ಚರ್ಚಿಸಿ ನ್ಯಾಯ ಒದಗಿಸಲಾಗುವದು ಎಂದು ಟಿ.ಪಿ. ರಮೇಶ್ ಭರವಸೆ ನೀಡಿದರು.

ಕಾಂಗ್ರೆಸ್‍ನ ರಾಜ್ಯ ಉಸ್ತುವಾರಿ ಕಾರ್ಯದರ್ಶಿ ವೇಣುಗೋಪಾಲ್ ಅವರು ತಾ. 24 ರಂದು ಜಿಲ್ಲಾ ಘಟಕದ ಪದಾಧಿಕಾರಿಗಳ ಸಭೆಯನ್ನು ಬೆಂಗಳೂರಿನಲ್ಲಿ ನಡೆಸುತ್ತಿರುವದಾಗಿ ರಮೇಶ್ ತಿಳಿಸಿದರು. ಎಐಸಿಸಿ ವೀಕ್ಷಕ ವಿಷ್ಣುನಾಥ್ ಜೂ. 10 ರಂದು ಮತ್ತೆ ಜಿಲ್ಲೆಗೆ ಭೇಟಿ ನೀಡಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಿದ್ದಾರೆ ಎಂದರು.

ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ.ಲೋಕೇಶ್ ಅವರ ಅಮಾನತು ಆದೇಶವನ್ನು ಹಿಂದಕ್ಕೆ ಪಡೆಯಲಾಗಿದ್ದು, ಪಕ್ಷಕ್ಕಿಂತ ವ್ಯಕ್ತಿಗಳು ದೊಡ್ಡವರಲ್ಲ ಎನ್ನುವದನ್ನು ಈಗಾಗಲೆ ಹಲವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಟಿ.ಪಿ.ರಮೇಶ್ ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಚೋರರ ಉಪಟಳ ಹೆಚ್ಚಾಗಿದೆ. ಅಲ್ಲದೆ, ಸಾಕು ದನಗಳನ್ನು ಕದ್ದು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ. ಕೊಡಗಿನ ಗಡಿಭಾಗ ಮಾಕುಟ್ಟ ಗೇಟ್‍ನ ಬಗ್ಗೆ ಸಂಶಯ ಮೂಡಿವೆ. ಆದ್ದರಿಂದ ಪಕ್ಷದ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗುವದೆಂದು ಹೇಳಿದರು.

ಜಿಲ್ಲೆಯಲ್ಲಿ ಶೀಘ್ರದಲ್ಲೆ ಮಹಿಳಾ ಕಾಂಗ್ರೆಸ್ ಸಮಾವೇಶವನ್ನು ನಡೆಸಲಾಗುತ್ತಿದ್ದು, ಕಾಂಗ್ರೆಸ್ ಭವನ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗಿದೆ. ಕಾಂಗ್ರೆಸ್ ಪ್ರಮುಖರಾದ ಮಿಟ್ಟು ಚಂಗಪ್ಪ ಅವರು ಭವನ ಟ್ರಸ್ಟ್‍ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಸಕ್ರಿಯವಾಗಿ ದುಡಿಯುವ ಏಳು ಮಂದಿಯನ್ನು ಟ್ರಸ್ಟಿಗಳನ್ನಾಗಿ ಗುರುತಿಸಲಾಗುವದೆಂದು ಅವರು ತಿಳಿಸಿದರು.

ನ. 1 ಉದ್ಘಾಟನೆ

ನೂತನ ಖಾಸಗಿ ಬಸ್ ನಿಲ್ದಾಣ ಕಾಮಗಾರಿ ನಡೆಯುತ್ತಿದ್ದು, ನ. 1 ರಂದು ಬಸ್ ನಿಲ್ದಾಣ ಉದ್ಘಾಟನೆಯಾಗಲಿದೆ ಎಂದು ರಮೇಶ್ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜೀವ್‍ಗಾಂಧಿ ಪಂಚಾಯತ್ ರಾಜ್ ಸಂಘÀಟನೆಯ ಸಂಯೋಜಕಿ ತೆನ್ನಿರ ಮೈನ, ನಗರಸಭಾ ಸದಸ್ಯರುಗಳಾದ ಪ್ರಕಾಶ್ ಆಚಾರ್ಯ, ಉದಯಕುಮಾರ್ ಹಾಗೂ ವೆಂಕಟೇಶ್ ಉಪಸ್ಥಿತರಿದ್ದರು.