ಮಡಿಕೇರಿ, ಮೇ 22 : ರಾಜ್ಯಾದ್ಯಂತ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಖಾಯಂಗೊಳಿಸದೆ ಇರುವ ರಾಜ್ಯ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ತಾ. 25 ರಂದು ರಾಜ್ಯಾದ್ಯಂತ ‘ಪೆÇರಕೆ’ ಪ್ರತಿಭಟನೆ ನಡೆಸಲು ಕರ್ನಾಟಕ ರಾಜ್ಯ ಗುತ್ತಿಗೆ ಪೌರಕಾರ್ಮಿಕರ ಸಂಘ ನಿರ್ಧರಿಸಿದೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘÀದ ರಾಜ್ಯ ಸಂಚಾಲಕ ಎಸ್. ಅಭಿಗೌಡ ಹನಕೆರೆ, ಕಳೆದ ಅನೇಕ ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಪೌರ ಕಾರ್ಮಿಕರನ್ನು ಖಾಯಂಗೊಳಿಸದೆ ಸರಕಾರ ನಿರ್ಲಕ್ಷ್ಯ ಮನೋಭಾವ ತೋರುತ್ತಿದೆ ಎಂದು ಆರೋಪಿಸಿದರು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ಜೂನ್ 8 ರಿಂದ ರಾಜ್ಯದಲ್ಲಿರುವ 50 ಸಾವಿರಕ್ಕೂ ಅಧಿಕ ಪೌರಕಾರ್ಮಿಕರು ಕಾರ್ಯವನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವದಕ್ಕೂ ಮೊದಲು ತನ್ನ ಪ್ರಣಾಳಿಕೆಯಲ್ಲಿ ಗುತ್ತಿಗೆ ಪೌರಕಾರ್ಮಿಕರು ಮತ್ತು ವಾಟರ್ ಮೆನ್‍ಗಳನ್ನು ಖಾಯಂಗೊಳಿಸುವ ಭರವಸೆಯನ್ನು ನೀಡಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಳೆÉದ ನಾಲ್ಕು ವರ್ಷಗಳಲ್ಲಿ ತನ್ನ ಭರವಸೆಯನ್ನು ಈಡೇರಿಸದೆ ವಚನ ಭ್ರಷ್ಟವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರದಿಂದ ತಾರತಮ್ಯ

ದೇಶವ್ಯಾಪಿ 12 ಲಕ್ಷ ಪೌರಕಾರ್ಮಿಕರು ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ತಾವು ಕಾರ್ಯ ನಿರ್ವಹಿಸುವ ಪ್ರದೇಶಗಳ ಸ್ವಚ್ಛತೆ ಸೇರಿದಂತೆ ವಿವಿಧ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿದ್ದಾರೆ. ಇವರ ಸಂಕಷ್ಟಗಳಿಗೆ ಕಿವಿಗೊಡದ ಕೇಂದ್ರ ಸರ್ಕಾರ ಯೋಜನೆಯ ಯಶಸ್ಸಿಗೆ ಕೈಜೋಡಿಸುವ ಪೌರ ಕಾರ್ಮಿಕರಿಗೆ ನೆರವನ್ನು ಒದಗಿಸಿಲ್ಲವೆಂದು ಟೀಕಿಸಿದರು.

ಸಂಘಟನೆಯ ಮತ್ತೋರ್ವ ರಾಜ್ಯ ಸಂಚಾಲಕ ಮಹಂತೇಶ್ ಮಾತನಾಡಿ, ಪೌರಕಾರ್ಮಿಕರು ಮತ್ತು ವಾಟರ್‍ಮೆನ್‍ಗಳಿಗೆ ಹುಸಿ ಆಶ್ವಾಸನೆ ನೀಡಿ ವಂಚಿಸಿರುವ ಕಾರಣ ಪ್ರತಿಭಟನೆಗೆ ಮುಂದಾಗಿರುವದಾಗಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘÀದ ಸದಸ್ಯರುಗಳಾದ ತಗ್ಗಿ ಮಾರುತಿ ಹಾಗೂ ಪೌರ ಕಾರ್ಮಿಕ ಸತೀಶ್ ಉಪಸ್ಥಿತರಿದ್ದರು.