ಮಡಿಕೇರಿ, ಮೇ 22: ಈ ಹಿಂದೆ ಎರಡು ವರ್ಷಗಳ ಕಾಲ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ, ಅಕಾಲಿಕ ಮರಣ ಹೊಂದಿರುವ ಅನುರಾಗ್ ತಿವಾರಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಭೆ ತಾ. 23 ರಂದು (ಇಂದು) ಬೆಳಗ್ಗೆ 10 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ. ಸಿಇಓ ಚಾರುಲತಾ ಸೋಮಲ್ ತಿಳಿಸಿದ್ದಾರೆ.