ಸಿದ್ದಾಪುರ, ಮೇ 22 : ನೆಲ್ಯಹುದಿಕೇರಿ ವಲಯ ಕಾಂಗ್ರೆಸ್ ಹಾಗೂ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಭಾರತದ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಸ್ಮರಣೆ ಹಾಗೂ ಗ್ರಾಮಸ್ವರಾಜ್ ಅಭಿಯಾನ ಕಾರ್ಯಾಗಾರ ಕಾರ್ಯಕ್ರಮ ನೆಲ್ಯಹುದಿಕೇರಿ ಗ್ರಾ.ಪಂ ಸಭಾಂಗಣದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಬಾರ ಅಧ್ಯಕ್ಷ ಟಿ.ಪಿ ರಮೇಶ್ ಅಧ್ಯಕ್ಷತೆಯಲ್ಲಿ ನಡೆಯಿತು. ದಿ.ಪ್ರಧಾನಿ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಟಿ.ಪಿ. ರಮೇಶ್, ಕಾಂಗ್ರೆಸ್ ಪಕ್ಷ ಸಾಮಾಜಿಕ ಕಳಕಳಿಯಿಂದ ಕಟ್ಟ ಕಡೆಯ ವ್ಯಕ್ತಿಗಳ ಅಭಿವೃದ್ಧಿಗೆ ಶ್ರಮಿಸುತ್ತಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಅತ್ಯುತ್ತಮವಾದ ಯೋಜನೆಗಳನ್ನು ಜಾರಿಗೆ ತಂದಿದ್ದು, ಜನಪರ ಕಾಳಜಿಯನ್ನು ಹೊಂದಿದೆ ಎಂದರು.
ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿ ಪಂಚಾಯತ್‍ರಾಜ್ ಸಂಘಟನೆಯ ಸಂಚಾಲಕ ಮೈನಾ, ನೆಲ್ಯಹುದಿಕೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ರಜಾಕ್, ಐ.ಎನ್.ಟಿ.ಯು.ಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ಕಾಂಗ್ರೆಸ್ ಮುಖಂಡ ಎ.ಕೆ ಹಕೀಂ ವಿಚಾರ ಮಂಡಿಸಿದರು.
ಜಿ.ಪಂ. ಸದಸ್ಯೆ ಸುನಿತಾ ಮಂಜುನಾಥ್, ತಾ.ಪಂ ಸದಸ್ಯೆ ಸುಹದಾ ಅಶ್ರಫ್, ಗ್ರಾ.ಪಂ ಅಧ್ಯಕ್ಷೆ ಪದ್ಮಾವತಿ, ಉಪಾಧ್ಯಕ್ಷೆ ಸಫಿಯಾ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್, ಮಹಿಳಾ ಕಾಂಗ್ರೆಸ್‍ನ ಜಿಲ್ಲಾಧ್ಯಕ್ಷ ಪುಷ್ಪಲತ, ಮಡಿಕೇರಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಾ ಮಂಜು, ಕಾಂಗ್ರೆಸ್ ಮುಖಂಡರಾದ ವಿ.ಎಸ್. ಸಜಿ, ಗ್ರಾ.ಪಂ. ಸದಸ್ಯರುಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.