ಮಡಿಕೇರಿ, ಮೇ 23: ಕೊಡಗು ಜಿಲ್ಲೆಯಲ್ಲಿ 2013ರ ಆಗಸ್ಟ್, 15 ರಿಂದ 2015 ಜೂನ್ 22 ರವರೆಗೆ ಜಿಲ್ಲಾಧಿಕಾರಿಯಾಗಿ ಹಾಗೂ ಕೆಲವು ತಿಂಗಳ ಕಾಲ ಜಿ.ಪಂ.ಸಿಇಒ ಆಗಿ ಕಾರ್ಯನಿರ್ವಹಿಸಿದ್ದ ಅನುರಾಗ್ ತಿವಾರಿ ಅವರ ನಿಧನಕ್ಕೆ ಜಿಲ್ಲಾ ಪಂಚಾಯತ್ ವತಿಯಿಂದ ಸಂತಾಪ ಸೂಚಿಸಲಾಯಿತು. ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಮಂಗಳವಾರ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿ.ಪಂ.ಸಿಇಓ ಚಾರುಲತಾ ಸೋಮಲ್, ಏರ್ ಮಾರ್ಷಲ್(ನಿವೃತ್ತ) ಕೆ.ಸಿ.ಕಾರ್ಯಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್, ಜಿ.ಪಂ.ಮಾಜಿ ಉಪಾಧ್ಯಕ್ಷರಾದ ಅಲ್ಲಾರಂಡ ಬೀನಾ ಬೊಳ್ಳಮ್ಮ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅರ್ಜುನ್ ಸೇನ್, ಜಿ.ಪಂ.ಉಪಕಾರ್ಯದರ್ಶಿ ವಿಶ್ವನಾಥ ಪೂಜಾರಿ, ಜಿ.ಪಂ.ಮುಖ್ಯ ಯೋಜನಾಧಿಕಾರಿ ಸತ್ಯನ್, ಜಿ.ಪಂ.ಯೋಜನಾ ನಿರ್ದೇಶಕರಾದ ಸಿದ್ದಲಿಂಗಮೂರ್ತಿ, ಮುಖ್ಯ ಲೆಕ್ಕಾಧಿಕಾರಿ ನಂದ, ಬಿಸಿಎಂ ಇಲಾಖಾ ಅಧಿಕಾರಿ ಕೆ.ವಿ.ಸುರೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಓ.ಆರ್.ಶ್ರೀರಂಗಪ್ಪ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಡಾ.ನಾಗರಾಜು, ಐಟಿಡಿಪಿ ಇಲಾಖೆ ಅಧಿಕಾರಿ ಪ್ರಕಾಶ್, ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ದರ್ಶನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಮಮ್ತಾಜ್, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಸಿ.ಜಗನ್ನಾಥ್, ವಾರ್ತಾಧಿಕಾರಿ ಚಿನ್ನಸ್ವಾಮಿ ಇತರರು ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡು ಸಂತಾಪ ಸೂಚಿಸಿದರು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಕೊಡಗು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಅನುರಾಗ್ ತಿವಾರಿ ಅವರ ಅಕಾಲಿಕ ನಿಧನ ದು:ಖತಂದಿದೆ. ಸದಾ ಕ್ರಿಯಾಶೀಲತೆ ಮತ್ತು ಪಾರದರ್ಶಕತೆಯಿಂದ ಎಲ್ಲರ ಮೆಚ್ಚುಗೆಗೆ ತಿವಾರಿ ಅವರು ಪಾತ್ರರಾಗಿದ್ದರು ಎಂದರು.
ಏರ್ಮಾರ್ಷಲ್(ನಿವೃತ್ತ) ಕೆ.ಸಿ.ಕಾರ್ಯಪ್ಪ ಅವರು ಮಾತನಾಡಿ ನಿಷ್ಠಾವಂತ ಅಧಿಕಾರಿಯನ್ನು ಕಳೆದುಕೊಂಡಿರುವದಕ್ಕೆ ದುಃಖ ತಂದಿದೆ. ಕ್ರಿಯಾಶೀಲ ಅಧಿಕಾರಿಯಾಗಿದ್ದ ಅನುರಾಗ್ ತಿವಾರಿ ಅವರ ಸೇವೆ ಸ್ಮರಣೀಯ ಎಂದು ಸಂತಾಪ ವ್ಯಕ್ತಪಡಿಸಿದರು.
ಜಿ.ಪಂ.ಸಿಇಓ ಚಾರುಲತಾ ಸೋಮಲ್ ಅವರು ಅನುರಾಗ್ ತಿವಾರಿ ಅವರು ಉತ್ತಮ ಆಡಳಿತಗಾರರಾಗಿ ಜನಮೆಚ್ಚುಗೆಗೆ ಪಾತ್ರರಾಗಿದ್ದರು ಇವರ ಅಕಾಲಿಕ ನಿಧನ ಸಾರ್ವಜನಿಕ ಆಡಳಿತದಲ್ಲಿ ತುಂಬಲಾರದ ನಷ್ಟ ಉಂಟಾಗಿದೆ ಎಂದರು.
ಜಿ.ಪಂ.ಮಾಜಿ ಉಪಾಧ್ಯಕ್ಷೆ ಅಲ್ಲಾರಂಡ ಬೀನಾಬೊಳ್ಳಮ್ಮ ಕಠಿಣ ಸಮಸ್ಯೆಗಳನ್ನು ಬಗೆ ಹರಿಸುವದರಲ್ಲಿ ಚತುರರಾಗಿದ್ದ ಅನುರಾಗ್ ತಿವಾರಿ ಅವರ ಸೇವೆ ಮೆಚ್ಚುವಂತದ್ದು ಎಂದು ಅವರು ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಒ.ಆರ್.ಶ್ರೀರಂಗಪ್ಪ, ಚಿತ್ತಾರ ವಾಹಿನಿಯ ಆನಂದ್ ಕೊಡಗು, ಜಿಲ್ಲಾಧಿಕಾರಿ ಕಚೇರಿಯ ಷಣ್ಮುಗ, ಪ್ರಶಾಂತ್, ಐಟಿಡಿಪಿ ಇಲಾಖೆಯ ರಂಗನಾಥ್ ಮಾತನಾಡಿದರು. ಸ್ವಸ್ಥ ಸಂಸ್ಥೆಯ ಮುರುಗೇಶ್ ಅವರು ಅನುರಾಗ್ ತಿವಾರಿ ಅವರ ಸೇವೆ ಸ್ಮರಿಸಿದರು. ನಾನಾ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.