ಮಡಿಕೇರಿ, ಮೇ 24: ಕೊಡಗು ಜಿಲ್ಲೆಯಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಏಕಲವ್ಯ ಮಾದರಿ ವಸತಿ ಶಾಲೆ, ಅಟಲ್ ಬಿಹಾರಿ ವಾಜಪೇಯಿ, ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಈಗಾಗಲೇ ವೆಬ್ಸೈಟ್ನಲ್ಲಿ ಹಾಗೂ ಎಲ್ಲಾ ವಸತಿ ಶಾಲೆಗಳಲ್ಲಿ/ 3 ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಲ್ಲಿ ಪ್ರಕಟಿಸಲಾಗಿರುತ್ತದೆ.
ಈ ವಸತಿ ಶಾಲೆಗಳಿಗೆ ಪ್ರವೇಶಾತಿಗಾಗಿ ತಾ. 31 ರ ಬೆಳಿಗ್ಗೆ 9.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಕೌನ್ಸ್ಲಿಂಗ್ ನಡೆಯಲಿದೆ. ಈ ಕೌನ್ಸ್ಲಿಂಗ್ಗೆ ಕಟ್ ಆಫ್ ರ್ಯಾಂಕ್ನ ಒಳಗಿರುವ ವರ್ಗವಾರು ಮತ್ತು ಲಿಂಗವಾರು ವಿದ್ಯಾರ್ಥಿಗಳು ಮೂಲ ಜಾತಿ ದೃಢೀಕರಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಭಾವಚಿತ್ರದೊಂದಿಗೆ ಹಾಜರಾಗುವಂತೆ ಮಡಿಕೇರಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.