ಮಡಿಕೇರಿ, ಮೇ 24: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಅವರ ಉಪಸ್ಥಿತಿಯಲ್ಲಿ ಭಯೋತ್ಪಾದನಾ ವಿರೋಧಿ ದಿನಾಚರಣೆ ಅಂಗವಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸುವ ಕಾರ್ಯಕ್ರಮ ನಡೆಯಿತು.

ಪ್ರತಿಜ್ಞಾ ವಿಧಿ ಬೋಧಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್, ಅಹಿಂಸೆ ಹಾಗೂ ಸಹನೆಗೆ ಹೆಸರಾದ ಭಾರತ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸದಿಂದ ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮಥ್ರ್ಯದಿಂದ ಎದುರಿಸ ಬೇಕೆಂದು ಕರೆ ನೀಡಿದರು.

ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆಯೊಡ್ಡುತ್ತಿರುವ ಶಕ್ತಿಗಳ ವಿರುದ್ಧ ಹೋರಾಡಲು ಎಲ್ಲರೂ ಪಣತೊಡಬೇಕು ಎಂದು ಅವರು ಪ್ರತಿಜ್ಞೆಯನ್ನು ಬೋಧಿಸಿದರು.

ಉಪ ವಿಭಾಗಾಧಿಕಾರಿ ಡಾ. ನಂಜುಂಡೇಗೌಡ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಪುಟ್ಟಸ್ವಾಮಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮುನೀರ್ ಅಹಮ್ಮದ್, ನಗರಸಭೆ ಪೌರಾಯುಕ್ತೆ ಬಿ. ಶುಭ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಣಜೂರು ಮಂಜುನಾಥ್, ಉದ್ಯೋಗ ವಿನಿಮಯಾಧಿಕಾರಿ ಸಿ. ಜಗನ್ನಾಥ್, ಷಂಶುದ್ದೀನ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.