ಮಡಿಕೇರಿ, ಮೇ 24: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಚೇರಿಯ ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಜಿಲ್ಲೆಯ 3 ತಾಲೂಕುಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕಾರ್ಯನಿರ್ವಹಿಸುವಂತೆ ಗ್ರಾಮೀಣ ಪುನರ್ವಸತಿ (ವಿಆರ್ಡಬ್ಲ್ಯು) ಕಾರ್ಯಕರ್ತರನ್ನು ಮಾಸಿಕ ಗೌರವಧನದ ಆಧಾರದಲ್ಲಿ ಆಯ್ಕೆ ಮಾಡಲಾಗುವದು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಮಾಸಿಕ ರೂ. 2 ಸಾವಿರಗಳ ಗೌರವಧನ ನೀಡಲಾಗುವದು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಸಲ್ಲಿಸಲು 10ನೇ ತರಗತಿ ಉತ್ತೀರ್ಣ, ಅನುಉತ್ತೀರ್ಣರಾಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ. 18 ರಿಂದ 45 ವರ್ಷದ ವಯೋಮಿತಿಯಲ್ಲಿರಬೇಕು ಮತ್ತು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು. ಅಭ್ಯರ್ಥಿಯು ವಿಕಲಚೇತನರಾಗಿದ್ದು, ವಿಕಲಚೇತನತೆಯ ಸ್ವರೂಪ ಶೇ. 75 ಕ್ಕಿಂತ ಕಡಿಮೆಯಿರಬೇಕು. ವಿಕಲಚೇತನರ ಮನೆ ಮನೆಗೆ ಭೇಟಿ ಮಾಡಿ ಸಮೀಕ್ಷೆ ಮಾಡುವುದು ಹಾಗೂ ವಿವಿಧ ಸೌಲಭ್ಯಗಳನ್ನು ಕೊಡಿಸಲು ಶಕ್ತರಾಗಿರಬೇಕು. ಆಸಕ್ತ ವಿಕಲಚೇತನರು ನಿಗದಿತ ಅರ್ಜಿ ನಮೂನೆಗಳನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ನ್ಯಾಯಾಲಯದ ಮುಂಭಾಗ, ಕೋಟೆ ಆವರಣ, ಮಡಿಕೇರಿ, ಇಲ್ಲಿಂದ ಪಡೆದು ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಜೂನ್ 20 ರೊಳಗೆ ಈ ಕಚೇರಿಗೆ ತಲಪುವಂತೆ ಕಳುಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ದೂ.08272-222830 ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಕಾರ್ಯಕರ್ತರ ಹುದ್ದೆ ಖಾಲಿ ಇರುವ ಮಡಿಕೇರಿ ತಾಲೂಕಿನ ಬೇಂಗೂರು, ಬಲ್ಲಮಾವಟಿ, ಚೆಂಬು, ಕೆ. ನಿಡುಗಣೆ, ಕುಂದಚೇರಿ, ಕುಂಜಿಲ, ಮಕ್ಕಂದೂರು, ಮರಗೋಡು, ಸಂಪಾಜೆ, ಪಾರಾಣೆ, ಎಮ್ಮೆಮಾಡು, ಬೆಟ್ಟಗೇರಿ, ನರಿಯಂದಡ ಹಾಗೂ ಸೋಮವಾರಪೇಟೆ ತಾಲೂಕಿನ ಆಲೂರು-ಸಿದ್ದಾಪುರ, ಬ್ಯಾಡಗೊಟ್ಟ, ಬೆಟ್ಟದಳ್ಳಿ, ಬೇಳೂರು, ಚೆಟ್ಟಳ್ಳಿ, ದುಂಡಳ್ಳಿ, ದೊಡ್ಡಮಳ್ತೆ, ಗರ್ವಾಲೆ, ಹಂಡ್ಲಿ, 7ನೇ ಹೊಸಕೋಟೆ, ಕಂಬಿಬಾಣೆ, ಮಾದಾಪುರ, ನೆರುಗಳಲೆ, ಶನಿವಾರಸಂತೆ, ನೆಲ್ಲಿಹುದಿಕೇರಿ, ಚೌಡ್ಲು, ಹರದೂರು, ಕಿರಗಂದೂರು, ನಂಜರಾಯಪಟ್ಟಣ ಮತ್ತು ವೀರಾಜಪೇಟೆ ತಾಲೂಕಿನ ಅಮ್ಮತ್ತಿ, ಬಾಳೆಲೆ, ಬಿಟ್ಟಂಗಾಲ, ಬಿರುನಾಣಿ, ಬಿ. ಶೆಟ್ಟಿಗೇರಿ, ಬಲ್ಯಮಂಡೂರು, ಚಂಬೆಬೆಳ್ಳೂರು, ಚೆನ್ನಯ್ಯನಕೋಟೆ, ದೇವರಪುರ, ಗೋಣಿಕೊಪ್ಪ, ಹೊಸೂರು, ಹುದಿಕೇರಿ, ಹಾತೂರು, ಹಾಲುಗುಂದ, ಕದನೂರು, ಕುಟ್ಟ, ಮಾಯಾಮುಡಿ, ನಾಲ್ಕೇರಿ, ಪಾಲಿಬೆಟ್ಟ, ಪೊನ್ನಂಪೇಟೆ, ಪೊನ್ನಪ್ಪಸಂತೆ, ಸಿದ್ದಾಪುರ, ಟಿ. ಶೆಟ್ಟಿಗೇರಿ, ತಿತಿಮತಿ, ಆರ್ಜಿ, ಕೆ. ಬಾಡಗ, ಕಿರುಗೂರು, ನಿಟ್ಟೂರು, ಶ್ರೀಮಂಗಲ, ಅರುವತ್ತೋಕ್ಲು ವ್ಯಾಪ್ತಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ
ಕೊಡಗು ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಮೆಟ್ರಿಕ್ ನಂತರದ (ಎಸ್.ಎಸ್.ಎಲ್.ಸಿ. ನಂತರ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ) 2 ವಿದ್ಯಾರ್ಥಿ ನಿಲಯಗಳು ಕಾರ್ಯನಿರ್ವಹಿಸುತ್ತಿದ್ದು, ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ (ಮುಸ್ಲಿಂ, ಕ್ರೈಸ್ತ, ಸಿಖ್, ಪಾರ್ಸಿ, ಬೌದ್ಧ ಮತ್ತು ಜೈನ್) ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಜಿಲ್ಲಾ ಬಿಸಿಎಂ ಕಚೇರಿ ಮತ್ತು ವಿದ್ಯಾರ್ಥಿನಿಲಯಗಳಿಂದ ಪಡೆದುಕೊಂಡು ಪೂರಕ ದಾಖಲಾತಿಗಳೊಂದಿಗೆ ಜಿಲ್ಲಾ ಬಿಸಿಎಂ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ತಾಲೂಕು ವಿಸ್ತರಣಾಧಿಕಾರಿಗಳು ಹಾಗೂ ನಿಲಯ ಮೇಲ್ವಿಚಾರಕರು ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ, ಮಡಿಕೇರಿ, ಮೊ.ಸಂ:7204320214 ಹಾಗೂ ನಿಲಯ ಮೇಲ್ವಿಚಾರಕರು, ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, ಕುಶಾಲನಗರ ಮೊ.ಸಂ:9845576430 ಹಾಗೂ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಮ್ಯಾನ್ಸ್ ಕಾಂಪೌಂಡು ಹತ್ತಿರ, ಮಡಿಕೇರಿ ಈ ಕಚೇರಿಯನ್ನು ಮತ್ತು ದೂರವಾಣಿ ಸಂಖ್ಯೆ: 08272-225628 ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಬಿಸಿಎಂ ಅಧಿಕಾರಿ ಕೆ.ವಿ. ಸುರೇಶ್ ತಿಳಿಸಿದ್ದಾರೆ.
ದೃಶ್ಯಕಲಾ ಕಾಲೇಜಿಗೆ
ಮೈಸೂರಿನಲ್ಲಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಪ್ರಥಮ ಮೂಲ ತರಗತಿಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರಥಮ ಮೂಲ ತರಗತಿಗೆ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿಬೇಕು. ವಯೋಮಿತಿ ಗರಿಷ್ಠ 22 ವರ್ಷ ಆಗಿರುತ್ತದೆ. ಪ್ರವೇಶದ ಬಗ್ಗೆ ಅರ್ಜಿ ಮತ್ತು ವಿವರಣ ಪತ್ರಿಕೆಯನ್ನು ರೂ. 230 ಗಳನ್ನು ನಗದಾಗಿ ಪಾವತಿಸಿ ಅಥವಾ ರೂ. 270 ಡಿ.ಡಿ.ಯನ್ನು ಡೀನ್, ಕಾವಾ, ಮೈಸೂರು ಅವರ ಹೆಸರಿನಲ್ಲಿ ಪಡೆದು ಅಂಚೆ ಮೂಲಕ ಕಳುಹಿಸಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಡೀನ್ರವರ ಕಚೇರಿ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು, ಭಾರತೀಯ ಪಠ್ಯಪುಸ್ತಕ ಮುದ್ರಣಾಲಯ ಆವರಣ, ಸಿದ್ದಾರ್ಥನಗರ, ಮೈಸೂರು-570011 ವಿಳಾಸಕ್ಕೆ ಕಳುಹಿಸುವದು.
ಪ್ರಥಮ ಮೂಲ ತರಗತಿಗೆ ಅರ್ಜಿ ಸಲ್ಲಿಸಲು ಜೂನ್ 8 ಕೊನೆಯ ದಿನವಾಗಿದೆ. ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಭಾರತ ಸರ್ಕಾರ ಪಠ್ಯಪುಸ್ತಕ ಮುದ್ರಣಾಲಯದ ಆವರಣ, ಸಿದ್ದಾರ್ಥನಗರ, ಮೈಸೂರು ಇಲ್ಲಿ ಜೂನ್ 9 ರಂದು ಬೆಳಿಗ್ಗೆ 11 ಗಂಟೆಗೆ ಅರ್ಹತಾ ಪರೀಕ್ಷೆ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ವೈಯಕ್ತಿಕ ಸಂದರ್ಶನ ನಡೆಯಲಿದೆ. ಜೂನ್ 13 ಶುಲ್ಕ ಪಾವತಿ ಅಂತಿಮ ದಿನವಾಗಿದೆ. ಜೂನ್ 19 ರಂದು ತರಗತಿ ಪ್ರಾರಂಭವಾಗಲಿದೆ.
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ವರ್ಗಾವಣೆ ಪತ್ರ, ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರಗಳ ಮೂಲ ದಾಖಲಾತಿಗಳನ್ನು ಪರಿಶೀಲಿಸಲು ಕಡ್ಡಾಯವಾಗಿ ಹಾಜರುಪಡಿಸಲು ಸೂಚಿಸಿದೆ. ಸಂದರ್ಶನಕ್ಕೆ ರಚಿಸಿರುವ ಕಲಾಕೃತಿಗಳನ್ನು ಹಾಜರುಪಡಿಸಬಹುದು ಎಂದು ಮೈಸೂರು ಕಾವಾ ಡೀನ್ ತಿಳಿಸಿದ್ದಾರೆ.