ಸೋಮವಾರಪೇಟೆ, ಮೇ 24: ನಡೆದಾಡುವ ದೇವರೆಂದೇ ಖ್ಯಾತಿವೆತ್ತಿರುವ ಸಿದ್ದಗಂಗಾ ಮಠದ ಹಿರಿಯ ಶ್ರೀಗಳಾದ ಡಾ. ಶಿವಕುಮಾರ ಸ್ವಾಮೀಜಿಗಳನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ವಿಶ್ರಾಂತಿ ಪಡೆಯುತ್ತಿರುವ ಡಾ. ಶಿವಕುಮಾರ ಸ್ವಾಮೀಜಿಗಳನ್ನು ಜಿಲ್ಲೆಯ ಕೆಲವು ಮಠಾಧೀಶರುಗಳೊಂದಿಗೆ ಶಾಸಕ ರಂಜನ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ನಂತರ ಸಿದ್ದಗಂಗಾ ಮಠದ ಕಿರಿಯ ಶ್ರೀಗಳನ್ನು ಭೇಟಿ ಮಾಡಿದರು. ಈ ಸಂದರ್ಭ ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶರಾದ ಸದಾಶಿವ ಸ್ವಾಮೀಜಿ, ಕಲ್ಲುಮಠದ ಮಠಾಧೀಶರಾದ ಮಹಾಂತ ಸ್ವಾಮೀಜಿ, ಬಸವ ಕಲ್ಯಾಣ ಸುಶಾಂತಾಶ್ರಮ ಮಠದ ಸ್ವತಂತ್ರ ಬಸವಲಿಂಗ ಸ್ವಾಮೀಜಿ, ಮನೆಹಳ್ಳಿ ಮಠಾಧೀಶರಾದ ಮಹಾಂತ ಶಿವಲಿಂಗ ಸ್ವಾಮೀಜಿ, ಮುದ್ದಿನಕಟ್ಟೆ ಮಠಾಧೀಶರಾದ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಚಿಲುಮೆ ಮಠಾಧೀಶರಾದ ಜಯದೇವ ಸ್ವಾಮೀಜಿ, ಸಿಡಿಗಳಲೆ ಮಠಾಧೀಶರಾದ ಇಮ್ಮಡಿ ಶಿವಲಿಂಗ ಸ್ವಾಮೀಜಿ, ತೊರೆನೂರು ಮಠಾಧೀಶರಾದ ಮಲ್ಲೇಶ ಸ್ವಾಮೀಜಿ ಇತರರು ಉಪಸ್ಥಿತರಿದ್ದರು.