ಮಡಿಕೇರಿ, ಮೇ 25: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಹಿರಿಯ ನಾಗರಿಕ ವೇದಿಕೆ, ವಕೀಲರ ಸಂಘ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಬಾಲಭವನದ ಚೇತನ ಚಿಲುಮೆ ಸಭಾಂಗಣದಲ್ಲಿ ತಾ. 27 ರಂದು (ನಾಳೆ) ಮಧ್ಯಾಹ್ನ 2 ಗಂಟೆಗೆ ಕಾನೂನು ಅರಿವು ಕಾರ್ಯಕ್ರಮ ನಡೆಯಲಿದೆ.

ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ. ಪವನೇಶ್ ಅವರು ಉದ್ಘಾಟಿಸಲಿದ್ದಾರೆ. ಹಿರಿಯ ನಾಗರಿಕ ವೇದಿಕೆಯ ಅಧ್ಯಕ್ಷ ಜಿ.ಟಿ. ರಾಘವೇಂದ್ರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೋಹನ್ ಪ್ರಭು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ್ ಎನ್.ಎಂ. ಇತರರು ಪಾಲ್ಗೊಳ್ಳಲಿದ್ದಾರೆ. ಹಿರಿಯ ನಾಗರಿಕರ ಹಕ್ಕುಗಳ ಬಗ್ಗೆ ವಕೀಲ ಬಿ.ಕೆ. ಶ್ರೀಧರ್ ಭಾಷಣ ಮಾಡಲಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.