ಮಡಿಕೇರಿ, ಮೇ 25: ಜಿಲ್ಲೆಯಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಏಕಲವ್ಯ ಮಾದರಿ ವಸತಿ ಶಾಲೆ, ಅಟಲ್ ಬಿಹಾರಿ ವಾಜಪೇಯಿ, ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಿಗೆ 2017-18ನೇ ಸಾಲಿನ 6ನೇ ತರಗತಿ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಈಗಾಗಲೇ ವೆಬ್‍ಸೈಟ್‍ನಲ್ಲಿ ಹಾಗೂ ಎಲ್ಲಾ ವಸತಿ ಶಾಲೆಗಳಲ್ಲಿ/ 3 ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಲ್ಲಿ ಪ್ರಕಟಿಸಲಾಗಿರುತ್ತದೆ.

ಈ ವಸತಿ ಶಾಲೆಗಳಿಗೆ ಪ್ರವೇಶಾತಿಗಾಗಿ ತಾ. 31 ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಕೌನ್ಸಿಲಿಂಗ್ ನಡೆಯಲಿದೆ. ಕೌನ್ಸ್‍ಲಿಂಗ್‍ಗೆ ಕಟ್ ಆಫ್ ರ್ಯಾಂಕ್‍ನ ಒಳಗಿರುವ ವರ್ಗವಾರು ಮತ್ತು ಲಿಂಗವಾರು ವಿದ್ಯಾರ್ಥಿಗಳು ಮೂಲ ಜಾತಿ ದೃಢೀಕರಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಭಾವಚಿತ್ರದೊಂದಿಗೆ ಹಾಜರಾಗುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.