ಮೂರ್ನಾಡು, ಮೇ 27 : ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘ, ಕೊಡಗು ಜಿಲ್ಲಾ ಅಂಭಾಭವಾನಿ ಯುವಕ ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘ ತಾಳತ್ತಮನೆ ಇವರ ಆಶ್ರಯದಲ್ಲಿ 4ನೇ ವರ್ಷದ ಕ್ರೀಡಾ ಉತ್ಸವಕ್ಕೆ ಇಂದು ಚಾಲನೆ ನೀಡಲಾಯಿತು.
ಮೂರ್ನಾಡು ವಿದ್ಯಾಸಂಸ್ಥೆ ಮೈದಾನದಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾದ ಕ್ರೀಡಾಕೂಟವನ್ನು ಕತ್ತಲೆಕಾಡಿನ ರಾಷ್ಟ್ರ ಮಟ್ಟದ ಬಾಕ್ಸಿಂಗ್ ಕ್ರೀಡಾಪಟು ಎಂ.ಇ. ನಾರಾಯಣ ಕ್ರಿಕೆಟ್ ಪಂದ್ಯವನ್ನು ಬ್ಯಾಟ್ ಮಾಡುವದರ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕ್ರೀಡೆಯಲ್ಲಿ ಭಾಗವಹಿಸುವ ದರೊಂದಿಗೆ ಶಿಸ್ತು, ಸಮಯ ಪರಿಪಾಲನೆ ಪ್ರಜ್ಞೆಯನ್ನು ಮೂಡಿಸಿಕೊಳ್ಳುವಂತೆ ಕರೆ ನೀಡಿದರು.
ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವೀರಾಜಪೇಟೆ ತಾಲೂಕು ಭಾಜಪದ ಸಂಘಟನಾ ಕಾರ್ಯದರ್ಶಿ ಪರಮೇಶ್ವರ್ ವಹಿಸಿದ್ದರು. ಕೊಡಗು ಜಿಲ್ಲಾ ಮರಾಠ ಮರಾಠಿ ಸಮಾಜ ಸೇವಾ ಸಂಘದ
ಸ್ಥಾಪನಾಧ್ಯಕ್ಷ ಎಂ.ಟಿ. ದೇವಪ್ಪ, ಮಾಜಿ ಅಧ್ಯಕ್ಷ ಎಂ.ಕೆ. ವಿಶ್ವನಾಥ್, ತಾಳತ್ತಮನೆ ಅಂಭಾಭವಾನಿ ಯುವಕ ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ ಅಧ್ಯಕ್ಷ ಎಂ.ಎಸ್. ದಿವ್ಯಕುಮಾರ್, ಉಪಾಧ್ಯಕೆÀ್ಷ ರತ್ನಮಂಜರಿ ನರಸಿಂಹ ಇತರರು ಹಾಜರಿದ್ದರು.
ಇಂದು ಸಮಾರೋಪ
ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘದ ಮಹಾಸಭೆ ಹಾಗೂ ಕ್ರೀಡಾ ಉತ್ಸವದ ಬಹುಮಾನ ವಿತರಣೆ ಸಮಾರಂಭ ತಾ. 28ರಂದು (ಇಂದು) 3 ಗಂಟೆಗೆ ನಡೆಯಲಿದೆ. ಬೆಳಗಾವಿ ಭಾರತೀಯ ಅನಿಲ ಪ್ರಾಧಿಕಾರ ಪ್ರಧಾನ ವ್ಯವಸ್ಥಾಪಕ ಎಸ್. ವಿಜಯಾನಂದ ಸಮಾರೋಪ ಸಮಾರಂಭ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ, ಕೊಡಗು ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ.ಎ. ಹರೀಶ್, ನಿವೃತ್ತ ಪೋಸ್ಟ್ ಮಾಸ್ಟರ್ ಜಿ.ಆರ್. ನಾಯ್ಕ್, ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘದ ಸ್ಥಾಪಕ ಅಧ್ಯಕ್ಷ ವಾಮನ್ ನಾಯ್ಕ್, ಮಾಜಿ ಅಧ್ಯಕ್ಷ ಎಂ.ಟಿ. ಚೆನಿಯಪ್ಪ, ಸಿಂಡಿಕೇಟ್ ಬ್ಯಾಂಕ್ ನಿವೃತ್ತ ವ್ಯವಸ್ಥಾಪಕ ಎಂ.ಟಿ. ಮೋಣಪ್ಪ ಮೊದಲಾದವರು ಪಾಲ್ಗೊಳ್ಳಲಿದ್ದಾರೆ.