ಕುಶಾಲನಗರ, ಮೇ 26: ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಒಂದು ವಾರದೊಳಗೆ ಹೆಚ್ಚುವರಿ ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ತಿಳಿಸಿದ್ದಾರೆ. ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ಪತ್ರೆಯ ಅವ್ಯವಸ್ಥೆಗಳ ಬಗ್ಗೆ ಗಮನಕ್ಕೆ ಬಂದಿದ್ದು ಅಗತ್ಯ ವೈದ್ಯರ ನೇಮಕಾತಿ ಹಾಗೂ ಹೆಚ್ಚುವರಿ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಆರೋಗ್ಯ ಅಧಿಕಾರಿ ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ವಾರದೊಳಗೆ ಅಗತ್ಯ ಕ್ರಮ ಕೈಗೊಳ್ಳಲಾಗುವದು ಎಂದು ತಿಳಿಸಿದರು.
ಇದೇ ಸಂದರ್ಭ ಆಸ್ಪತ್ರೆಯ ವೈದ್ಯಾಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡ ಅವರು ಸ್ಥಳದಲ್ಲಿದ್ದ ರೋಗಿಗಳ
(ಮೊದಲ ಪುಟದಿಂದ) ಬಳಿ ಕುಂದುಕೊರತೆ ವಿಚಾರಿಸಿದರು. ಈ ಸಂದರ್ಭ ಪ್ರಮುಖರಾದ ಕೆ.ಜಿ. ಮನು, ವಿ.ಪಿ. ಶಶಿಧರ್, ಎಂ.ಡಿ. ಕೃಷ್ಣಪ್ಪ, ವಿ.ಪಿ. ಮುಖೇಶ್, ಪ್ರವೀಣ್, ವೈದ್ಯರಾದ ಡಾ. ರವಿಚಂದ್ರ ಮತ್ತಿತರರು ಇದ್ದರು.