ಮಡಿಕೇರಿ, ಮೇ 26 : ಭಾರತೀಯ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ನ ಜಿಲ್ಲಾ ಘಟಕದ ವತಿಯಿಂದ “ಕರ್ನಾಟಕ ಸರ್ಕಾರದ ಭರವಸೆಯ ನಡಿಗೆ 5ನೇ ವರ್ಷದೆಡೆಗೆ” ಘೋಷವಾಕ್ಯದೊಂದಿಗೆ ಬೈಕ್ ಜಾಥಾ ತಾ.28 ರಿಂದ ತಾ. 30ರವರೆಗೆ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಜ್ದೂರ್ ಕಾಂಗ್ರೆಸ್ನ ರಾಜ್ಯ ಉಪಾಧ್ಯಕ್ಷ ಎನ್.ಎಂ. ಮುತ್ತಪ್ಪ, ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಹೇಳುವಲ್ಲಿ ಕಾಂಗ್ರೆಸ್ನ ಕೆಲ ಘಟಕಗಳು ವಿಫಲವಾದ ಹಿನ್ನೆಲೆಯಲ್ಲಿ ಮಜ್ದೂರ್ ಕಾಂಗ್ರೆಸ್ ಈ ಕಾರ್ಯವನ್ನು ಮಾಡಬೇಕೆಂದು ಕೆಪಿಸಿಸಿ ಆದೇಶ ನೀಡಿರುವ ಮೇರೆಗೆ ರಾಜ್ಯವ್ಯಾಪಿ ಜಾಥಾ ನಡೆಸಲಾಗುತ್ತಿದೆ. ಮೊದಲ ಹಂತದ ಕಾರ್ಯಕ್ರಮವಾಗಿ ಕೊಡಗು ಜಿಲ್ಲೆಯಲ್ಲಿ ಬೈಕ್ ಜಾಥಾ ನಡೆಯಲಿದ್ದು, ತಾ.28 ರಂದು ಬೆಳಗ್ಗೆ 9.30 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಅವರು ನೆಲ್ಲಿಹುದಿಕೇರಿಯಲ್ಲಿ ಬೈಕ್ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
ಐಎನ್ಟಿಯುಸಿ ರಾಜ್ಯಾಧ್ಯಕ್ಷ ರಾಕೇಶ್ ಮಲ್ಲಿ, ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ ವೆಂಕಟೇಶ್, ಜಂಟಿ ಪ್ರಧಾನ ಕಾರ್ಯದರ್ಶಿ ಎನ್.ಎಂ. ಮುದ್ದಪ್ಪ, ರಾಜ್ಯ ಮಹಿಳಾ ಅಧ್ಯಕೆÀ್ಷ ತಾರಾ ಚಂದನ್, ವಿಧಾನ ಪರಿಷತ್ ಸದಸೆÀ್ಯ ವೀಣಾ ಅಚ್ಚಯ್ಯ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಟಿ.ಪಿ. ರಮೇಶ್, ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ, ಕೆಪಿಸಿಸಿ ಕಾರ್ಯದರ್ಶಿ ಎಸ್.ಎ. ಹುಸೇನ್, ಜಿ.ಪಂ. ಸದಸ್ಯೆ ಕೆ.ಪಿ. ಚಂದ್ರಕಲಾ, ಮಾಜಿ ಶಾಸಕ ಕೆ.ಎಂ. ಇಬ್ರಾಹಿಂ ಮತ್ತಿತರ ಪ್ರಮುಖರು ಈ ಸಂದರ್ಭ ಹಾಜರಿರುವರು.
ತಾ. 29 ರಂದು ಸೋಮವಾರಪೇಟೆಯ ತಣ್ಣೀರುಹಳ್ಳ ಗ್ರಾಮದಲ್ಲಿ ತಾಲ್ಲೂಕು ಪಂಚಾಯ್ತಿ ಸದಸ್ಯ ಅನಂತ ಕುಮಾರ್ ಜಾಥಾವನ್ನು ಉದ್ಘಾಟಿಸಲಿದ್ದಾರೆ. ಪಕ್ಷದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.
ತಾ. 30 ರಂದು ಸುಂಟಿಕೊಪ್ಪ ಕಾರು ನಿಲ್ದಾಣದಿಂದ ಆರಂಭಗೊಳ್ಳುವ ಜಾಥಾವನ್ನು ಕೆಪಿಸಿಸಿ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ ಉದ್ಘಾಟಿಸಲಿದ್ದಾರೆ. ಐಎನ್ಟಿಯುಸಿ ಪ್ರಧಾನ ಕಾರ್ಯದರ್ಶಿ ಎನ್.ಎಂ. ಮುದ್ದಪ್ಪ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಎ. ಯಾಕೂಬ್, ಮಾಜಿ ಶಾಸಕ ಕೆ.ಎಂ. ಇಬ್ರಾಹಿಂ, ಜಿಲ್ಲಾ ಪಂಚಾಯ್ತಿ ಸದಸ್ಯ ಅಬ್ದುಲ್ ಲತೀಫ್, ಕುಶಾಲನಗರ ಕೂಡಾ ಅಧ್ಯಕ್ಷ ಬಿ.ಜಿ. ಮಂಜುನಾಥ್, ಜಿಪಂ ಸದಸೆÀ್ಯ ಕುಮುದಾ ಧರ್ಮಪ್ಪ, ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ವಿ.ಪಿ.ಶಶಿಧರ್ ಮತ್ತಿತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ಎನ್.ಎಂ.ಮುತ್ತಪ್ಪ ತಿಳಿಸಿದರು.
ತಾ. 30 ರಂದು ಮಧ್ಯಾಹ್ನ 3.30 ಗಂಟೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಜಾಥಾದ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಎನ್.ಎಂ.ಮುತ್ತಪ್ಪ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ವಕ್ತಾರ ಅಜ್ಜಳ್ಳಿ ರವಿ, ಪ್ರಮುಖರಾದ ಮುನೀರ್ ಹಾಗೂ ಪವನ್ ಪೆಮ್ಮಯ್ಯ ಉಪಸ್ಥಿತರಿದ್ದರು.