ಮಡಿಕೇರಿ, ಮೇ 27: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕ-ಯುವತಿಯರು ಪರಿಶಿಷ್ಟ ಪಂಗಡದ ಸಮುದಾಯದ ಒಳಗೆ ವಿವಾಹವಾದಲ್ಲಿ ಅವರಿಗೆ ರೂ. 2 ಲಕ್ಷಗಳ ಪ್ರೋತ್ಸಾಹ ಧನ ನೀಡಲಾಗುವದು. ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.
ಷರತ್ತುಗಳು: ಅಂತರ್ಜಾತಿ ವಿವಾಹವಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕ-ಯುವತಿಯರು ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗಕ್ಕೆ ಸೇರಿದವರಾಗಿರಬೇಕು. ಈ ಸೌಲಭ್ಯ ಪಡೆಯುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವತಿಯರ ವಯೋಮಾನ ಕನಿಷ್ಟ 18 ವರ್ಷದಿಂದ 42 ವರ್ಷಗಳಾಗಿರತಕ್ಕದ್ದು. ಯುವಕರಿಗೆ ಕನಿಷ್ಟ 21 ವರ್ಷದಿಂದ ಗರಿಷ್ಠ 42 ವರ್ಷಗಳಾಗಿರತಕ್ಕದ್ದು. ಈ ಯೋಜನೆಯಡಿ ಪ್ರೋತ್ಸಾಹ ಧನ ಪಡೆಯಲು ದಂಪತಿಗಳ ಒಟ್ಟಾರೆ ವಾರ್ಷಿಕ ಆದಾಯ ರೂ. 2 ಲಕ್ಷ ಮೀರಬಾರದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಯುವಕ-ಯುವತಿಯರು ಮದುವೆಯಾದ ಒಂದು ವರ್ಷದ ಅವಧಿಯೊಳಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸತಕ್ಕದ್ದು.
ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ: 08272-223552 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ವೀರಾಜಪೇಟೆ ತಾಲೂಕಿನಲ್ಲಿರುವ ಆಶ್ರಮ ಶಾಲೆಗಳಿಗೆ
ವೀರಾಜಪೇಟೆ ತಾಲೂಕಿನಲ್ಲಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಹಾಗೂ ಗಿರಿಜನ ಆಶ್ರಮ ಶಾಲೆಗಳಿಗೆ ಅರ್ಹ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಗಿರಿಜನ ಆಶ್ರಮ ಶಾಲೆಗಳಿಗೆ 1 ನೇ ತರಗತಿಯಿಂದ 7ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ವಿದ್ಯಾರ್ಥಿ ನಿಲಯಗಳು ಹಾಗೂ ಆಶ್ರಮ ಶಾಲೆಗಳಲ್ಲಿ ಉಚಿತ ವಸತಿ, ಊಟ, ತಿಂಡಿ, ಪುಸ್ತಕ, ಸಮವಸ್ತ್ರ ಹಾಗೂ ಇತರೆ ನಿಲಯಗಳಲ್ಲಿ ಲಭ್ಯವಾಗುವ ಮೂಲಭೂತ ಸೌಲಭ್ಯಗಳು ಸಂಪೂರ್ಣ ಉಚಿತವಾಗಿರುತ್ತದೆ. ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಸಹ ಅನುಪಾತವಾರು ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ.
ತಿತಿಮತಿ, ಕುಟ್ಟ ಸರ್ಕಾರಿ ಗಿರಿಜನ ಬಾಲಕರ ನಿಲಯಗಳು, ಕಾರ್ಮಾಡು, ತಿತಿಮತಿ, ಕುಟ್ಟ ಸರ್ಕಾರಿ ಗಿರಿಜನ ಬಾಲಕಿಯರ ನಿಲಯಗಳು, ಚೆನ್ನಂಗಿ ಬಸವನಹಳ್ಳಿ, ಮರೂರು, ತಿತಿಮತಿ, ನಿಟ್ಟೂರು ಜಾಗಲೆ, ನಾಗರಹೊಳೆ, ಕೋತೂರು, ಗೋಣಿಗದ್ದೆ ಸರ್ಕಾರಿ ಗಿರಿಜನ ಆಶ್ರಮ ಶಾಲೆಗಳಲ್ಲಿ ಅವಕಾಶವಿದೆ.
ಅರ್ಜಿಗಳನ್ನು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ ಅಥವಾ ಸಂಬಂಧಿಸಿದ ನಿಲಯ-ಆಶ್ರಮ ಶಾಲೆಗಳ ವಾರ್ಡನ್, ಮುಖ್ಯ ಶಿಕ್ಷಕರಿಂದ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸಂಬಂಧಿಸಿದ ವಿದ್ಯಾರ್ಥಿ ನಿಲಯಗಳ ವಾರ್ಡನ್ ಹಾಗೂ ಆಶ್ರಮ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಜೂನ್ 10 ರೊಳಗೆ ಸಲ್ಲಿಸುವಂತೆ ವೀರಾಜಪೇಟೆ ತಾಲೂಕು ಪೊನ್ನಂಪೇಟೆಯ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಜೆ.ಆರ್.ಎಫ್. ಮಾದರಿಯಲ್ಲಿ ಫೆಲೋಶಿಪ್ಗಾಗಿ
ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರ ವತಿಯಿಂದ 2017-18ನೇ ಸಾಲಿಗೆ ಅಲ್ಪಸಂಖ್ಯಾತ (ಮುಸ್ಲಿಂ, ಕ್ರೈಸ್ತ, ಸಿಖ್, ಪಾರ್ಸಿ, ಬೌದ್ಧ ಮತ್ತು ಜೈನ್) ಸಮುದಾಯದ ವಿದ್ಯಾರ್ಥಿಗಳು ಯಾವದೇ ವಿಷಯಗಳ ಬಗ್ಗೆ ವಿಶ್ವವಿದ್ಯಾನಿಲಯಗಳಲ್ಲಿ ಎಂ.ಫಿಲ್ ಮತ್ತು ಪಿ.ಎಚ್.ಡಿ. ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್. ಮಾದರಿಯಲ್ಲಿ ಫೆಲೋಶಿಪ್ಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ತಿತಿತಿ.goಞಜom.ಞಚಿಡಿ.ಟಿiಛಿ.iಟಿ ವೆಬ್ಸೈಟ್ನಲ್ಲಿ ಡೌನ್ಲೋಡ್ ಮಾಡಿಕೊಂಡು ಪೂರಕ ದಾಖಲಾತಿಗಳೊಂದಿಗೆ ಜೂನ್ 10 ರೊಳಗೆ ನಿರ್ದೇಶನಾಲಯಕ್ಕೆ ಸಲ್ಲಿಸುವದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25 ಸಾವಿರ ಫೆಲೋಷಿಪ್ ಹಾಗೂ ಸಾದಿಲ್ವಾರು ರೂ. 10 ಸಾವಿರಗಳ ಸಹಾಯಧನ ನೀಡಲಾಗುವದು. ಹೆಚ್ಚಿನ ವಿವರಗಳನ್ನು ತಿತಿತಿ.goಞಜom.ಞಚಿಡಿ.ಟಿiಛಿ.iಟಿ ಇಲಾಖಾ ವೆಬ್ಸೈಟ್ನಲ್ಲಿ ಪಡೆಯಬಹುದು ಹಾಗೂ 080-22863617/ 22863618 ನ್ನು ಹಾಗೂ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಮ್ಯಾನ್ಸ್ ಕಾಂಪೌಂಡು ಹತ್ತಿರ, ಮಡಿಕೇರಿ ಈ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ಇಲ್ಲಿನ ದೂ.ಸಂ: 08272-225628 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಬಿಸಿಎಂ ಅಧಿಕಾರಿ ಕೆ.ವಿ. ಸುರೇಶ್ ತಿಳಿಸಿದ್ದಾರೆ.
ಹೊಲಿಗೆ ತರಬೇತಿಗೆ
ಮಡಿಕೇರಿ ತಾಲೂಕಿನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಹಿಳಾ ಹೊಲಿಗೆ ತರಬೇತಿ ಕೇಂದ್ರ ಮೂರ್ನಾಡು ಇಲ್ಲಿಗೆ 2017-18ನೇ ಸಾಲಿಗೆ ಪ್ರವೇಶ ಕೋರಿ ಅರ್ಹ ನಿರುದ್ಯೋಗಿ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೊಲಿಗೆ ತರಬೇತಿ ಪಡೆಯಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 7ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ವಯಸ್ಸು 18 ವರ್ಷಕ್ಕಿಂತ ಮೇಲ್ಪಟ್ಟು ಹಾಗೂ 35 ವರ್ಷಗಳ ಒಳಗಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 1 ಲಕ್ಷಗಳನ್ನು ಮೀರಬಾರದು. ಪ್ರವರ್ಗ 1ರ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಅಭ್ಯರ್ಥಿಗಳ ವಾರ್ಷಿಕ ಆದಾಯ ಮಿತಿ ರೂ. 2.50 ಲಕ್ಷಗಳನ್ನು ಮೀರಬಾರದು. ಈ ಹಿಂದಿನ ವರ್ಷಗಳಲ್ಲಿ ಈ ಕೇಂದ್ರಗಳಲ್ಲಿ ತರಬೇತಿ ಪಡೆದುಕೊಂಡಿರುವ ಕುಟುಂಬಗಳ ಅಭ್ಯರ್ಥಿಗಳಿಗೆ ಅವಕಾಶ ಇರುವದಿಲ್ಲ.
2017-18ನೇ ಸಾಲಿನಲ್ಲಿ ಹೊಲಿಗೆ ತರಬೇತಿ ಕೇಂದ್ರ ಮೂರ್ನಾಡುವಿನಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಮಹಿಳಾ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು, ಮಡಿಕೇರಿ ತಾಲ್ಲೂಕು, ತಾಲೂಕು ಪಂಚಾಯಿತಿ ಕಚೇರಿ ಹಿಂಭಾಗ, ಮಡಿಕೇರಿ ಹಾಗೂ ಹೊಲಿಗೆ ಶಿಕ್ಷಕಿ ಮಹಿಳಾ ಹೊಲಿಗೆ ತರಬೇತಿ ಕೇಂದ್ರ ಮೂರ್ನಾಡು ಇವರಿಂದ ಕಚೇರಿ ವೇಳೆಯಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಜೂನ್ 15 ರೊಳಗೆ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು, ಮಡಿಕೇರಿ ತಾಲೂಕು ಇವರಿಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ: 9448205919/ 08272-298037 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ತಿಳಿಸಿದ್ದಾರೆ.